ಕಲಬುರಗಿ, ಜೂನ್. 10: ರಾಜ್ಯಸಭಾ ಸದಸ್ಯ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರೂ, ಮಾಜಿ ಕೇಂದ್ರ ಸಚಿವರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ತನಿಖೆ ಆಗಬೇಕು ಹಾಗೂ ಅಪರಾಧಿಗಳನ್ನು ಶೀಘ್ರದಲ್ಲಿಯೇ ಬಂಧಿಸಬೇಕೆAದು ಆಗ್ರಹಿಸಿ ಕಾಂಗ್ರೆಸ್ ಜಿಲ್ಲಾ ಸಮಿತಿಯಿಂದ ಇಂದು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿಪತ್ರ ಸಲ್ಲಿಸಿತು.
ನೂರಾರು ಸಂಖ್ಯೆಯಲ್ಲಿ ಸೇರಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಚೇರಿ ಎದುರು ಘೋಷಣೆ ಕೂಗುತ್ತ ತನಿಖೆಗೆ ಆಗ್ರಹಿಸಿದರು.
ಮಾಜಿ ವಿಧಾನ ಪರಿಷತ್ ಸದಸ್ಯರಾದ ಅಲ್ಲಂಪ್ರಭು ಪಾಟೀಲ್, ಡಿಸಿಸಿ ಅಧ್ಯಕ್ಷರಾದ ಜಗದೇವ ಗುತ್ತೇದಾರ, ಕಾಂಗ್ರೆಸ್ ಮುಖಂಡರಾದ ನೀಲಕಂಠರಾವ ಮೂಲಗೆ, ಮಾಜಿ ಮಹಾಪೌರ ಶರಣಕುಮಾರ ಮೋದಿ, ದಶರಥ ಒಂಟಿ, ಶ್ರೀಮತಿ ಚಂದ್ರಿಕಾ ಪರಮೇಶ್ವರ ಅಲ್ಲದೇ ಯುವ ಕಾಂಗೈನ ಈರಣ್ಣ ಝಳಕಿ, ಸೇರಿದಂತೆ ಇನ್ನು ಅನೇಕರು ಭಾಗವಹಿಸಿದ್ದರು.