ಆಗಸ್ಟ್ 2ರವರೆಗೆ ಎಲ್ಲಾ ಭಾನುವಾರುಗಳಂದು ಪೂರ್ಣದಿನದ ಲಾಕ್‌ಡೌನ್ ಜಾರಿಗೊಳಿಸಿ ಜಿಲ್ಲಾಧಿಕಾರಿಗಳ ಆದೇಶ

0
1439

ಕಲಬುರಗಿ.ಜೂನ್.30-ಕೋವಿಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ 2020ರ ಜುಲೈ 5ರ ಭಾನುವಾರದಿಂದ ಮುಂದಿನ ಎಲ್ಲಾ ಭಾನುವಾರಗಳಂದು (2020ರ ಆಗಸ್ಟ್ 2 ರವರೆಗೆ) ಕಲಬುರಗಿ ಜಿಲ್ಲೆಯಾದ್ಯಂತ ಪೂರ್ಣದಿನದ ಲಾಕ್‌ಡೌನ್ ಹಾಗೂ ಎಲ್ಲ ತರಹದ ಮದ್ಯ ಮಾರಾಟವನ್ನು ನಿಷೇಧಿಸಿ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಇದಲ್ಲದೇ ತಕ್ಷಣ ಜಾರಿಗೆ ಬರುವಂತೆ ಪ್ರತಿದಿನ ರಾತ್ರಿ 8 ರಿಂದ ಬೆಳಗಿನ 5 ಗಂಟೆಯವರೆಗೆ ಸಂಪೂರ್ಣ ಲಾಕ್‌ಡೌನ್ ಇದ್ದು, ಸಾರ್ವಜನಿಕ ಪ್ರವೇಶ ನಿಷೇಧಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕೆಂದು ಆದೇಶ ಹೊರಡಿಸಿದ್ದಾರೆ.
ಲಾಕ್‌ಡೌನ್ ಪ್ರಯುಕ್ತ ಜಿಲ್ಲೆಯಾದ್ಯಂತ ರಾತ್ರಿ 8 ರ ನಂತರ ಅವಶ್ಯಕ ಸರಕು ಸಾಮಾಗ್ರಿ ಮತ್ತು ಸೇವೆಗಳನ್ನು ಹೊರತುಪಡಿಸಿ ಸಂಪೂರ್ಣ ಜಿಲ್ಲೆಯನ್ನು ಸ್ತಬ್ದಗೊಳಿಸಬೇಕು.
ಭಾನುವಾರ ಹೊರತುಪಡಿಸಿ ಉಳಿದ ದಿನಗಳಂದು ರಾತ್ರಿ 8ರ ನಂತರ ಎಲ್ಲ ತರಹದ ಮದ್ಯ ಮಾರಾಟವನ್ನು ಸಹ £ಷೇಧಿಸಿ ಡಿ.ಸಿ. ಶರತ್ ಬಿ. ಅವರು ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here