ಕಲಬುರಗಿ,ಜುಲೈ.09-ಕಲಬುರಗಿ ಮಹಾನಗರ ಪಾಲಿಕೆಯಿಂದ ಕೇಂದ್ರ ಪುರಸ್ಕೃತ ಯೋಜನೆಯಾದ ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ “ಆತ್ಮ ನಿರ್ಭರ್ ನಿಧಿ”ಯ ವಿಶೇಷ ಕಿರುಸಾಲ ಸೌಲಭ್ಯ ಯೋಜನೆಯಡಿ ಸಾಲ ಪಡೆ ಯಲು ಅರ್ಹ ಬೀದಿ ವ್ಯಾಪಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬು ರಗಿ ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಈ ಯೋಜನೆಯಡಿ ಬೀದಿ ವ್ಯಾಪಾ ರಸ್ಥರಿಗೆ ಬ್ಯಾಂಕ್ ಮೂಲಕ 10 ಸಾವಿರ ರೂ.ಗಳವರೆಗೆ ಸಾಲ ನೀಡಲಾಗುತ್ತದೆ. ಪಡೆದ ಸಾಲವನ್ನು ಒಂದು ವರ್ಷದಲ್ಲಿ ಮರುಪಾವತಿ ಮಾಡಬೇಕು. ಸಮೀ ಕ್ಷೆಯಲ್ಲಿ ಗುರುತಿಸಲ್ಪಟ್ಟ ಬೀದಿ ವ್ಯಾಪಾ ರಸ್ಥರು ಉತ್ತರದ ವಾರ್ಡ್ ನಂ.1 ರಿಂದ 30 ಮತ್ತು 32ರ ವರೆಗಿನ ಫಲಾನು ಭವಿಗಳಾಗಿರಬೇಕು.
ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಮಹಾನಗರ ಪಾಲಿಕೆಯ ಆವಕ ಶಾಖೆಯಲ್ಲಿ ಪಡೆದು ಭರ್ತಿ ಮಾಡಿ ಅರ್ಜಿಯೊಂದಿಗೆ ಬಿ.ಪಿ.ಎಲ್. ಪಡಿತರ ಚೀಟಿ, ಆಧಾರ ಕಾರ್ಡ್, ಚುನಾವಣೆ ಗುರುತಿನ ಚೀಟಿ, ಬೀದಿ ವ್ಯಾಪಾರದ ಗುರುತಿನ ಚೀಟಿ, ಬ್ಯಾಂಕ್ ಪಾಸ್ ಬುಕ್ ಪುಸ್ತಕ, ಜಾತಿ ಆದಾಯ ಪ್ರಮಾಣ ಪತ್ರ, ಇತ್ತೀಚಿನ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ವ್ಯಾಪಾರ ಮಾಡುತ್ತಿರುವ ಸ್ಥಳದ ಭಾವಚಿತ್ರ ಹಾಗೂ ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ದಾಖಲೆಗಳನ್ನು ಲಗತ್ತಿಸಿ 2020ರ ಜುಲೈ 15 ರೊಳಗಾಗಿ ಕಲಬುರಗಿ ಮಹಾನಗರ ಪಾಲಿಕೆಯ ಆವಕ ಶಾಖೆಯಲ್ಲಿ ಸಲ್ಲಿಸಬೇಕು.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಡೇ-ನಲ್ಮ್ (ಉತ್ತರ) ಶಾಖೆಯ ಸಮ ಯದಾಯ ಸಂಘಟನಾಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ.