ಜೇವರ್ಗಿ ಶಾಸಕ ಡಾ. ಅಜಯ್‌ಸಿಂಗ್‌ರಿಗೆ ಕೊರೊನಾ ಪಾಸೀಟಿವ್

0
1360

ಕಲಬುರಗಿ, ಜು. ೧೦: ಜೇವರ್ಗಿ ಕೈ ಶಾಸಕ ಡಾ. ಅಜಯಸಿಂಗ್ ಅವರಿಗೆ ಕೊರೊನಾ ಪಾಸೀಟಿವ್ ಬಂದ ಬಗ್ಗೆ ಅವರು ತಮ್ಮ ಟ್ವೀಟ್‌ರನಲ್ಲಿ ಹೇಳಿಕೊಂಡಿದ್ದಾರೆ.
ತಮ್ಮ ಸಂಪರ್ಕದಲ್ಲಿ ಯರ‍್ಯಾರಿದ್ದಿರಾ ನೀವೆಲ್ಲಾ ಸ್ವಯಂಪ್ರೇರಿತರಾಗಿ ಹೋಂ ಕ್ವಾರಂಟೈನ್‌ಗೆ ಒಳಗಾಗಬೇಕೆಂದು ಅವರು ಟ್ವೀಟ್ ಮಾಡಿದ್ದಾರೆ.
ಕಳೆದ ೨ ವಾರಗಳಿಂದ ಡಾ. ಅಜಯಸಿಂಗ್ ಅವರು ಹಲವಾರು ಕಾರ್ಯಕ್ರಮಗಳಲ್ಲಿ ಅದರಲ್ಲೂ ಕೇಂದ್ರದ ಮೋದಿ ಸರಕಾರದ ವಿರುದ್ಧದ ಪೆಟ್ರೋಲ್ ಡೀಜೆಲ್ ಬೆಲೆ ಏರಿಕೆಯ ಬಗ್ಗೆ ಸೈಕಲ್ ರ‍್ಯಾಲಿಯ ಮುಂದಾಳತ್ವವನ್ನು ವಹಿಸಿದ್ದು, ಇದರಲ್ಲಿ ನೂರಾರು ಕಾರ್ಯಕರ್ತರು ಸೇರಿದಂತೆ ಹಲವಾರು ಕಾಂಗ್ರೆಸ್ ಶಾಸಕರು, ಮಾಜಿ ಸಚಿವರು, ಮಾಜಿ ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಹಲವಾರು ಮಂದಿ ಭಾಗವಹಿಸುವ ಮೂಲಕ ಡಾ. ಸಿಂಗ್ ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದಾರೆ.
ಕಳೆದ ೨ ದಿನಗಳಿಂದ ಕಲಬುರಗಿ ಜಿಲ್ಲೆಯಲ್ಲಿ ಬಿಜೆಪಿಯ ಬಸವರಾಜ ಮತ್ತಿಮೂಡ, ಸೇಡಂ ಶಾಸಕರಾದ ರಾಜಕುಮಾರ ಪಾಟೀಲ್ ತೇಲ್ಕೂರ್ ಸೇರಿದಂತೆ ಮೂರು ಜನ ಶಾಸಕರು ಕೊರೊನಾ ಸೋಂಕಿಗೆ ಒಳಪಟ್ಟಿದ್ದಾರೆ.

LEAVE A REPLY

Please enter your comment!
Please enter your name here