ನವದೆಹಲಿ, ಜು. 22: ಇತ್ತಿಚೇಗೆ ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಆಯ್ಕಯಾದ ಕಾಂಗೈನ ಹಿರಿಯ ಧುರೀಣ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ರಾಜ್ಯಸಭೆಯಲ್ಲಿ ಕನ್ನಡದಲ್ಲಿಯೇ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಶೃದ್ಧಾಪೂರ್ವಕವಾಗಿ ನಾನು ರಾಜ್ಯಸಭಾ ಸದಸ್ಯನಾಗಿ ಕರ್ತವ್ಯ ನಿರ್ವಹಿಸುತ್ತೇನೆಂದು ಶೃದ್ದೆಯಿಂದ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು ಹೀಗೆ ಟ್ವೀಟ್ ಮಾಡಿದ್ದು, ರಾಜ್ಯದ ಜನತೆಗೆ, ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಸೋನಿಯಾಗಾಂಧಿ, ರಾಹುಲ್ ಗಾಂಧಿ ಮತ್ತು ರಾಜ್ಯದ ಮುಖಂಡರಿಗೆ ಧನ್ಯವಾದ ತಿಳಿಸಲು ಬಯಸುತ್ತೇನೆ ಎಂದು ಹೇಳಿದ್ದಾರೆ.
ರಾಜ್ಯದ ಶ್ರೇಯೋಭಿವೃದ್ಧಿಗೆ ನನ್ನ ಸಕಲ ಪ್ರಯತ್ನಿಗಳಿಗೆ ನಿಮ್ಮ ಆಶೀರ್ವಾದ ಹಾಗೂ ಸಹಕಾರಯಿರಲಿ ಎಂದು ಇಚ್ಚಿಸುತ್ತೇನೆ ಎಂದು ತಿಳಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ ಅವರು ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿದ್ದಕ್ಕೆ ಅವರ ಅಭಿಮಾನಿಗಳು, ಕಾರ್ಯಕರ್ತರು, ಹಲವಾರು ಮುಖಂಡರು ಹರ್ಷ ವ್ಯಕ್ತ ಪಡಿಸಿ, ಖರ್ಗೆ ಅವರನ್ನು ಅಭಿನಂದಿಸಿದ್ದಾರೆ.