ಕಲಬುರಗಿ, ಜುಲೈ. 29: ಅಫಜಲಪೂರ ತಾಲೂಕಿನ ದೇವಲ್ ಗಾಣಗಾಪೂರದಲ್ಲಿರುವ ಪ್ರಸ್ತಿದ್ಧ ಶ್ರೀ ದತ್ತಾತ್ರೇಯ ದೇವಸ್ಥಾನದಲ್ಲಿ ಹುಣ್ಣಿಮೆ ದಿನದಂದು ಅಂದರೆ ದಿನಾಂಕ 3.8.2020ರಂದು ಸಾರ್ವಜನಿಕ ದರ್ಶನವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳಾದ ಬಿ. ಶರತ್ ಅವರು ಆದೇಶ ಹೊರಡಿಸಿದ್ದಾರೆ.
ಅಗಸ್ಟ 3ರಂದು ಸೋಮವಾರ ಶ್ರಾವಣ ಮಾಸದ ಹುಣ್ಣಿಮೆ ಇರುವುದರಿಂದ ಈ ದೇವಸ್ಥಾನಕ್ಕೆ ಪ್ರತಿ ಹುಣ್ಣಿಮೆಯಂದೆ ನೆರೆಯ ರಾಜ್ಯಗಳಾದ ಮಹಾರಾಷ್ಟç, ತೆಲಗಾಂಣ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಸಾವಿರಾರು ಭಕ್ತಾದಿಗಳು ಆಗಮಿಸುವುದರಿಂದ ದೇವರ ದರ್ಶನಕ್ಕೆ ಬರುವ ಭಕ್ತರನ್ನು ನಿಯಂತ್ರಿಸುವುದು ಹಾಗೂ ಸಾಮಾಜಿಕ ಅಂತರ ನಿರ್ವಹಣೆ ಮಾಡುವುದು ತುಂಬಾ ಕಷ್ಟವಾಗುವುದರಿಂದ ಹಾಗೂ ಈಗಾಗಲೇ ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇವರ ದರ್ಶನಕ್ಕೆ ಸಾರ್ವಜನಿಕ ನಿಂಭAಧ ಹೇರಲು ಸಲ್ಲಿಸಿದ ಪ್ರಸ್ತಾವನೆ ಹಿನ್ನೆಯಲ್ಲಿ ಈ ಆದೇಶವನ್ನು ಜಾರಿಮಾಡಲಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವ ಹಣಾ ಸಮಿತಿಯ ಅಧ್ಯಕ್ಷರೂ ಹಾಗೂ ಜಿಲ್ಲಾಧಿಕಾರಿಗಳು ಆಗಿರುವ ಬಿ. ಶರತ್ ಅವರು ಈ ಆದೇಶ ಹೊರಡಿಸಿದ್ದಾರೆ.