ನಗರದಲ್ಲಿ ಪತ್ರಿಕಾ ದಿನಾಚರಣೆ

0
1059

ಕಲಬುರಗಿ, ಜುಲೈ, 31: ಇಂದು ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾ ದಿನಾಚರಣೆಯನ್ನು ಜಿಲ್ಲಾಧಿಕಾರಿ ಶರತ್ ಬಿ. ಹಾಗೂ ಪೋಲಿಸ್ ಆಯುಕ್ತರಾದ ಎನ್. ಸತೀಶಕುಮಾರ ಅವರು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.
ಸಭೆಯಲ್ಲಿ ವಿಶೇಷ ಉಪನ್ಯಾಸವನ್ನು ಆಕಾಶವಾಣಿ ಕಾರ್ಯಕ್ರಮ ನಿರ್ವಹಾಕರಾದ ಡಾ. ಸದಾಂನದ ಪೆರ್ಲ್ ಅವರು ನೀಡಿದ. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಭವಾನಿಸಿಂಗ್ ಠಾಕೂರ ಅವರು ವಹಿಸಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಹಿರಿಯ ಪತ್ರಕರ್ತ ಸಂಗಮನಾಥ ರೇವತಗಾಂವ ನಿರ್ವಹಿಸಿದರೆ ಸ್ವಾಗತ ಭಾಷಣವನ್ನು ಇನ್ನೋರ್ವ ಹಿರಿಯ ಪತ್ರಕರ್ತ ದೇವೇಂದ್ರಪ್ಪ ಕಪನೂರ ಅವರು ಮಾಡಿದರು. ದೇವೇಂದ್ರಪ್ಪ ಅವಂಟಿ ಪ್ರಧಾನ ಕಾರ್ಯದರ್ಶಿಗಳ ಪ್ರಾರ್ಥನಾ ಗೀತೆಯನ್ನು ಹಾಡಿದರು.
ಸಮಾರಂಭದಲ್ಲಿ ಎಲ್ಲ ಹಿರಿಯ, ಕಿರಿಯ ಪತ್ರಕರ್ತರು ಸೇರಿದಂತೆ ಸುಮಾರು 30 ಜನರು ಭಾಗವಹಿಸಿದ್ದರು.
ಸಾಮಾಜಿಕ ಅಂತರದೊAದಿಗೆ ಕಾರ್ಯಕ್ರಮ ಆಯೋಜಿ ಸಲಾಗಿತ್ತು.

LEAVE A REPLY

Please enter your comment!
Please enter your name here