ಕಲಬುರಗಿ, ಆಗಸ್ಟ. 17: ಕರ್ನಾಟಕದ ಗಂಡು ಮೆಟ್ಟಿನ ನಾಡು ವೀರ ರಾಣಿ ಚೆನ್ನಮ್ಮ ಮತ್ತು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣರ ಜನ್ಮ ಭೂಮಿ ಬೆಳಗಾವಿಯ ಪೀರನವಾಡಿ ವೃತ್ತದಲ್ಲಿ ರಾಯಣ್ಣ ಪ್ರತಿಮೆ ಸ್ಥಾಪಿಸಲು ಅನುಮತಿ ನಿರಾಕರಿಸುತ್ತಿರುವ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಬೆಳಗಾವಿ ಜಿಲ್ಲಾಡಳಿತದ ನಡೆಯನ್ನು ಕರ್ನಾಟಕ ನವನಿರ್ಮಾಣ ಸೇನೆ ತೀವ್ರವಾಗಿ ಖಂಡಿಸುತ್ತದೆ ಎಂದು ಕರ್ನಾಟಕ ನವನಿರ್ಮಾಣ ಸೇನೆ ಜಿಲ್ಲಾ ಅಧ್ಯಕ್ಷ ರವಿ ದೇಗಾಂವ ಹೇಳಿದ್ದಾರೆ.
ಅವರಿಂದಿಲ್ಲಿ ಕರ್ನಾಟಕ ನವನಿರ್ಮಾನ ಸೇನೆ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಪೀರನವಾಡಿ ವೃತ್ತದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಬೆಳಗಾವಿ ಜಿಲ್ಲಾಡಳಿತವೇ ಯಾವುದೇ ಸಬೂಬು ನೀಡದೆ ಸ್ಥಾಪಿಸಬೇಕು.ಒಂದು ವೇಳೆ ಜಿಲ್ಲಾಡಳಿತ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಮಾತು ಕೇಳಿ ಅಸಡ್ಡೆ ತನ ತೋರಿದ್ದೇ ಆದರೆ ಕರ್ನಾಟಕ ನವನಿರ್ಮಾಣ ಸೇನೆಯೇ ಪ್ರತಿಮೆ ಸ್ಥಾಪಿಸಿ ಕ್ರಾಂತಿ ವೀರ ರಾಯಣ್ಣನಿಗೆ ಗೌರವ ಸಲ್ಲಿಸುವ ಕೆಲಸ ಮಾಡಲಿದೆ ಎಂದು ಈ ಮೂಲಕ ತಿಲಿಸಲು ಇಚ್ಛಿಸುತ್ತೇವೆ.ಆ ಸಮಯದಲ್ಲಿ ಏನಾದರೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ಅದಕ್ಕೆ ಬೆಳಗಾವಿ ಜಿಲ್ಲಾಡಳಿತವೇ ನೇರವಾದ ಹೊಣೆ ಹೊರಬೇಕಾಗುತ್ತದೆ ಎಂದು ಈ ಮೂಲಕ ಎಚ್ಚರಿಸಿದ್ದಾರೆ.
ಪ್ರತಿಭಟನೆಯಲ್ಲಿ ಕರ್ನಾಟಕ ನವನಿರ್ಮಾಣ ಸೇನೆ ಜಿಲ್ಲಾ ಅಧ್ಯಕ್ಷ ರವಿ ದೇಗಾಂವ, ಜಿಲ್ಲಾ ಉಪಾಧ್ಯಕ್ಷ ಪ್ರಶಾಂತ ಮಠಪತಿ, ಜಿಲ್ಲಾ ಕಾರ್ಯದ್ಯಕ್ಷ ಸಂತೋಷ ಪಾಟೀಲ, ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷೆ ಮಂಜುಳಾ ಪಾಟೀಲ, ಜಿಲ್ಲಾ ಯುವ ಘಟಕ ಅಧ್ಯಕ್ಷ ಶ್ರೀಶೈಲ ಸಾಗರೆ, ಜಿಲ್ಲಾ ಯುವ ಘಟಕ ಉಪಾಧ್ಯಕ್ಷ ಮಾಂತೇಶ ಹರವಾಳ, ನಗರ ಘಟಕ ಅಧ್ಯಕ್ಷೆ ಕವಿತಾ ದೇಗಾಂವ ಜಿಲ್ಲಾ ಮಹಿಳಾ ಘಟಕ ಉಪಾಧ್ಯಕ್ಷೆ ರಾಜೇಶ್ವರಿ ಉಪ್ಪಾರ, ನಗರ ಅಧ್ಯಕ್ಷ ಸತೀಶ ಪಾಟೀಲ್, ನಗರ ಘಟಕ ಉಪಾಧ್ಯಕ್ಷ ಧರ್ಮರಾಜ ಶಹಾಪುರ, ದೀಲಿಪ ಕಿರಸಾವಳಗಿ, ಋಷಿ ಬೆನಕನಳ್ಳಿ, ಮಹಾಂತೇಶ ಕೋಣೆ ಇದ್ದರು.
Home Uncategorized ಬೆಳಗಾವಿಯಲ್ಲಿ ರಾಯಣ್ಣ ಪ್ರತಿಮೆ ಅನಾವರಣಕ್ಕೆ ಅನುಮತಿ ನಿರಾಕರಣೆಗೆ ನವನಿರ್ಮಾನ ಸೇನೆಯಿಂದ ಪ್ರತಿಭಟನೆ