ರಾಹುಲ್, ಪ್ರಿಯಾಂಕಾ ಬಂಧನ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

0
1027

ಕಲಬುರಗಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಇಲ್ಲಿನ ಟೌನ್ ಹಾಲ್ ಆವರಣದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ನೇತೃತ್ವದಲ್ಲು ಮುಖ್ಯ ರಸ್ತೆಯಲ್ಲಿ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ಉತ್ತರ ಪ್ರದೇಶದ ಅತ್ಯಾಚಾರ ಸಂತ್ರಸ್ತೆ ಯುವತಿಯ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳುತ್ತಿದ್ದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಅಲ್ಲಿನ ಪೊಲೀಸರು ತಡೆದಿರುವುದು ಖಂಡನೀಯವಾಗಿದೆ. ಅಲ್ಲದೇ, ಇಬ್ಬರು ನಾಯಕರನ್ನೂ ಪೊಲೀಸರು ವಶಕ್ಕೆ ಪಡೆದಿರುವುದನ್ನು ಸರಿಯಲ್ಲ. ಇದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ನೇತೃತ್ವದ ಬಿಜೆಪಿ ಸರ್ವಾಧಿಕಾರಿ ಧೋರಣೆ ಎಂದು ಆರೋಪಿಸಿ ಯೋಗಿ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ನಂತರದಲ್ಲಿ ಜಿಲ್ಲಾಧಿಕಾರಿ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆ ಹೊರಡುತ್ತಿದ್ದಾಗ ಪ್ರತಿಭಟನಾಕಾರರನ್ನು ಪೊಲೀಸರು
ಮಾಜಿ ಎಂಎಲ್ ಸಿ ತಿಪ್ಪಣ್ಣಪ್ಪ ಕಮಕನೂರ, ಮುಖಂಡರಾದ ಭೀಮರೆಡ್ಡಿ ಕುರಕುಂದ, ಸಂಜೀವ ಐರೆಡ್ಡಿ, ಈರಣ್ಣ ಝಳಕಿ, ಬಾಬು ವಂಟಿ, ಮಹೇಶ್ವರಿ ವಾಲಿ, ಚಂದ್ರಿಕಾ ಪರಮೇಶ್ವರ, ರೇಣುಕಾ ಸಿಂಧೆ ಮುಂತಾದವರನ್ನು ವಶಕ್ಕೆ ಪಡೆದು ಎರಡು ವಾಹನಗಳಲ್ಲಿ ಹತ್ತಿಸಿ ಪೊಲೀಸರು ಕರೆದುಕೊಂಡು ಹೋದರು.
ಇಂದು ಮುಂಜಾನೆ ನಿಧನರಾದ ಕಾಂಗ್ರೆಸ್ ಹಿರಿಯ ಧುರೀಣ ಗುಂಡಪ್ಪ ಹಾಗರಗಿ ಅವರಿಗೆ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಿ, ಎರಡು ನಿಮಿಷ ಮೌನಾಚರಣೆ ಮಾಡಿದ ನಂತರ ಈ ಪ್ರತಿಭಟನೆಯನ್ನು ನಡೆಸಲಾಯಿತು.

LEAVE A REPLY

Please enter your comment!
Please enter your name here