ಕಲಬುರಗಿ.ಅ.16: ಕಲಬುರಗಿ ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆ ಮತ್ತು ಭೋಸಗಾ ಕೆರೆಯಿಂದ ಪ್ರವಾಹಕ್ಕೊಳಗಾದ ಕಲಬುರಗಿ ತಾಲೂಕಿನ ಸೈಯದ್ ಚಿಂಚೋಳಿ ಗ್ರಾಮವನ್ನು ಎತ್ತರದ ಪ್ರದೇಶಕ್ಕೆ ಸ್ಥಳಾಂತರಿಸುವAತೆ ಕಂದಾಯ ಸಚಿವ ಅರ್.ಅಶೋಕ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶುಕ್ರವಾರ ನೆರೆ ಪೀಡಿತ ಸೈಯದ್ ಚಿಂಚೋಳಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಕಾಳಜಿ ಕೇಂದ್ರಕ್ಕೂ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದ ನಂತರ ಸಚಿವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಗ್ರಾಮ ಸ್ಥಳಾಂತರ ಸಂಬAಧ ಗ್ರಾಮಕ್ಕೆ ಹತ್ತಿರದಲ್ಲಿಯೇ 11 ಎಕರೆ ಪ್ರದೇಶ ಗುರುತಿಸಲಾಗಿದೆ. ಗ್ರಾಮಸ್ಥರು ಒಪ್ಪಿದಲ್ಲಿ ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸಹಾಯಕ ಅಯುಕ್ತ ರಾಮಚಂದ್ರ ಗಡಾದೆ ಅವರಿಗೆ ಸಚಿವ ಆರ್. ಅಶೋಕ ಸೂಚಿಸಿದರು.
ಕಾಳಜಿ ಕೇಂದ್ರದಲ್ಲಿರುವ ಸಂತ್ರಸ್ತರಿಗೆ ಮೂರು ಹೊತ್ತು ಊಟದ ಜೊತೆಗೆ ಮೊಟ್ಟೆ, ಮಲಗಲು ಹೊದಿಕೆ, ಟವೆಲ್, ಸ್ಯಾನಿಟೈಸ್ ನೀಡಬೇಕು. ಮಹಿಳೆಯರಿಗೆ ಸೀರೆ ಸಹ ನೀಡುವಂತೆ ಕಂದಾಯ ಸಚಿವ ಅರ್.ಅಶೋಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಯಾದಗಿರಿ, ಬೀದರ, ರಾಯಚೂರು, ಕೊಪ್ಪಳ ಹಾಗೂ ಮುಂಬೈ ಕರ್ನಾಟಕದ ಬೆಳಗಾವಿಯಲ್ಲಿ ಹೆಚ್ಚಿನ ಮಳೆಯಾಗಿದೆ. ಕಲ್ಯಾಣ ಕರ್ನಾಟಕದಲ್ಲಿ ಕಳೆದ ಮೂರು ದಶಕದಲ್ಲಿ ಕಾಣದ ಭೀಕರ ಮಳೆ ಇದಾಗಿದ್ದು, ರಕ್ಷಣೆ ಕಾರ್ಯ ಕೈಗೊಳ್ಳಲು ಎನ್.ಡಿ.ಅರ್.ಎಫ್. ತಂಡಗಳನ್ನು ಈಗಾಗಲೆ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಕಳುಹಿಸಿದೆ. ರಾಜ್ಯದ ಒಟ್ಟು 173 ತಾಲೂಕುಗಳನ್ಬು ಪ್ರವಾಹ ಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ನೆರೆ ಪರಿಹಾರ ಕಾರ್ಯ ಯುದ್ದೋಪಾದಿಯಲ್ಲಿ ಸಾಗಿದೆ. ಕಲಬುರಗಿ ಜಿಲ್ಲೆಯ 11 ತಾಲೂಕುಗಳು ಸಹ ಪ್ರವಾಹ ಪೀಡಿತ ತಾಲೂಕುಗಳಲ್ಲಿ ಸೇರಿವೆ ಎಂದರು.