ಭೀಮಾ ಮತ್ತು ಕಾಗಿಣಾ ನದಿ ದಡದಲ್ಲಿರುವ ಗ್ರಾಮಸ್ಥರು ಕೂಡಲೇ ಸುರಕ್ಷಿತ ಸ್ಥಳಕ್ಕೆ ತೆರಳಲು ಜಿಲ್ಲಾಧಿಕಾರಿಗಳ ಸೂಚನೆ

0
989

ಕಲಬುರಗಿ.ಅ.17.: ಅಫಜಲಪೂರ ತಾಲೂಕಿನ ಸೊನ್ನ ಬ್ಯಾರೇಜ್‌ನಿಂದ ಶನಿವಾರ ಭೀಮಾ ನದಿಗೆ 8 ಲಕ್ಷ ಕ್ಯೂಸೆಕ್ಸ್ ನೀರು ಬಿಡಲಾಗಿದೆ. ಮುಂದೆ ಇನ್ನೂ ಹೆಚ್ಚಿನ ನೀರು ಹರಿಬಿಡುವ ಸಾಧ್ಯತೆವಿದ್ದು, ಇದು ಭೀಕರ ಪ್ರವಾಹದ ಮುನ್ಸೂಚನೆಯಾಗಿದೆ. ಆದ್ದರಿಂದ ಜಿಲ್ಲೆಯ ಭೀಮಾ ಹಾಗೂ ಕಾಗಿಣಾ ನದಿ ತೀರದ ದಂಡೆಯ ಅಫಜಲಪೂರ, ಜೇವರ್ಗಿ, ಚಿತ್ತಾಪುರ ಹಾಗೂ ಶಹಾಬಾದ ತಾಲೂಕಿನ ಗ್ರಾಮಸ್ಥರು ಕೂಡಲೆ ಸುರಕ್ಷಿತ ಸ್ಥಳಕ್ಕೆ ತೆರವಂತೆ ಜಿಲ್ಲಾಧಿಕಾರಿ ವಿ.ವಿ. ಜೋತ್ಸ್ನಾ ಸೂಚಿಸಿದ್ದಾರೆ.
ಪ್ರವಾಹದಲ್ಲಿ ಸಿಲುಕಿರುವವರ ಸಂರಕ್ಷಣೆಗೆ ಈಗಾಗಲೆ 3 ಎನ್.ಡಿ.ಆರ್.ಎಫ್. ತಂಡಗಳು ಪ್ರವಾಹ ಪೀಡಿತ ಪ್ರದೇಶದಲ್ಲಿ ಕಾರ್ಯೋನ್ಮುಖವಾಗಿದೆ. ಇದಲ್ಲದೆ ಎಸ್.ಡಿ.ಅರ್.ಎಫ್., ಪೊಲೀಸ್ ಹಾಗೂ ಅಗ್ನಿಶಾಮಕ ದಳ ತಂಡಗಳು ಸಹ ಕ್ಷೇತ್ರದಲ್ಲಿ 24 ಗಂಟೆ ಕಾಲ ಜನರ ಸಂರಕ್ಷಣೆಗೆ ಕಾರ್ಯನಿರ್ವಹಿಸುತ್ತಿವೆ.
ಇದಲ್ಲದೆ ಆರ್ಮಿ ಮತ್ತು ಏರ್ ಫೋರ್ಸ್ ತಂಡಗಳು ಜಿಲ್ಲೆಗೆ ಬರಲಿವೆ. ಹೀಗಾಗಿ ಸಾರ್ವಜನಿಕರು ಯಾವುದೇ ಭಯಕ್ಕೆ ಮತ್ತು ಅತಂಕಕ್ಕೆ ಒಳಗಾಗಬಾರದು. ರಕ್ಷಣಾ ಕಾರ್ಯಕ್ಕೆ ಅಗತ್ಯ ಸಹಕಾರ ನೀಡುವಂತೆ ವಿ.ವಿ.ಜ್ಯೋತ್ಸ್ನಾ ಅವರು ಮನವಿ ಮಾಡಿದ್ದಾರೆ.

LEAVE A REPLY

Please enter your comment!
Please enter your name here