ಕುತೂಹಲ ಕೆರಳಿಸಲಿರುವ ಚುನಾವಣಾ ಫಲಿತಾಂಶ

0
869

ಬೆoಗಳೂರು,ನ.9- ಆಡಳಿತ ಮತ್ತು ಪ್ರತಿಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ರಾಜರಾಜೇಶ್ವರಿನಗರ ಮತ್ತು ಶಿರಾ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಮತ್ತು ವಿಧಾನ ಪರಿಷತ್ ನಾಲ್ಕು ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆಯ ಮತ ಎಣಿಕೆ ನಾಳೆ ನಡೆಯಲಿದ್ದು, ಫಲಿತಾಂಶ ಕುತೂಹಲ ಕೆರಳಿಸಲಿದೆ.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯೂ ನಗರದ ಹಲಗೆವಡೇರಹಳ್ಳಿಯ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆ ಹಾಗೂ ಶಿರಾ ಕ್ಷೇತ್ರದ ಮತಗಳ ಎಣಿಕೆ ತುಮಕೂರಿನ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದೆ.
ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದ್ದು, ಬಹುತೇಕ ಮಧ್ಯಾಹ್ನ 12ರ ವೇಳೆಗೆ ಫಲಿತಾಂಶದ ಚಿತ್ರಣ ಸಿಗುವ ಸಾಧ್ಯತೆ ಇದೆ. ಉಪಚುನಾವಣೆಯ ಎರಡು ಕ್ಷೇತ್ರಗಳ ಪೈಕಿ ಒಟ್ಟು 31 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾದರೆ, ರಾಜರಾಜೇಶ್ವರಿ ನಗರ ಕ್ಷೇತ್ರದಿಂದ ಮುನಿರತ್ನ ( ಬಿಜೆಪಿ), ಕುಸುಮಾ ( ಕಾಂಗ್ರೆಸ್) , ಕೃಷ್ಣಮೂರ್ತಿ( ಜೆಡಿಎಸ್) ಸೇರಿದಂತೆ ಒಟ್ಟು 16 ಮಂದಿ ಅಭ್ಯರ್ಥಿಗಳು ಹಾಗೂ ಶಿರಾ ಕ್ಷೇತ್ರದಿಂದ ಡಾ.ರಾಜೇಶ್ ಗೌಡ( ಬಿಜೆಪಿ) ಟಿ.ಬಿ.ಜಯಚಂದ್ರ ( ಕಾಂಗ್ರೆಸ್) ಅಮ್ಮಾಜಮ್ಮ ( ಜೆಡಿಎಸ್) ಸೇರಿ ಒಟ್ಟು 15 ಅಭ್ಯರ್ಥಿಗಳು ಸ್ಪರ್ಧೆಸಿದ್ದಾರೆ.
ವಿಧಾನ ಪರಿಷತ್ ಕ್ಷೇತ್ರಗಳ ಪೈಕಿ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಜೆಡಿಎಸ್‌ನ ಆರ್.ಚೌಡಾರೆಡ್ಡಿ ತೂಪಲ್ಲಿ, ಕಾಂಗ್ರೆಸ್‌ನ ರಮೇಶ್ ಬಾಬು, ಬಿಜೆಪಿಯ ಚಿದಾನಂದ ಗೌಡ ಕಣದಲ್ಲಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯಿಂದ ಎಸ್.ವಿ.ಸಂಕನೂರ, ಕಾಂಗ್ರೆಸ್‌ನ ಕುಬೇರಪ್ಪ, ಕಣದಲ್ಲಿದ್ದರೆ, ಜೆಡಿಎಸ್ ಅಭ್ಯರ್ಥಿ ಈ ಕ್ಷೇತ್ರದಲ್ಲಿ ತಟಸ್ಥವಾಗಿದ್ದರಿಂದ ಪಕ್ಷೇತರ ಅಭ್ಯರ್ಥಿ ಬಸವರಾಜ ಗುರಿಕಾರಗೆ ಜೆಡಿಎಸ್ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ವ್ಯಕ್ತ ಪಡಿಸಿದೆ.
ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಶರಣಪ್ಪ ಮಟ್ಟೂರ, ಬಿಜೆಪಿಯ ಶಶಿಲ್ ನಮೋಶಿ, ಜೆಡಿಎಸ್‌ನ ತಿಮ್ಮಯ್ಯ ಪುರ್ಲೆ ಕಣದಲ್ಲಿದ್ದರೆ, ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಬಿಜೆಪಿಯಿಂದ ಪುಟ್ಟಣ್ಣ, ಜೆಡಿಎಸ್‌ನಿಂದ ಎ.ಪಿ.ರಂಗನಾಥ್, ಕಾಂಗ್ರೆಸ್‌ನಿAದ ಪ್ರವೀಣ್ ಪೀಟರ್ ಸ್ಪರ್ಧಿಸಿದ್ದಾರೆ.
ನಾಳೆ ಬೆಳಿಗ್ಗೆ 8.30 ರಿಂದ ಗುಲಬರ್ಗಾ ವಿವಿ ಗಣಿತಶಾಸ್ತç ವಿಭಾಗದಲ್ಲಿ ಮತ ಏಣಿಕೆ ನಡೆಯಲಿದ್ದು, ಈಗಾಗಲೇ ಮತ ಏಣಿಕೆಗಾಗಿ ಎಲ್ಲ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮಧ್ಯಾಹ್ನದ ವರೆಗೆ ಬಹುತೇಕ ಫಲಿತಾಂಶ ಹೊರಬೀಳುವ ನಿರೀಕ್ಷಯಿದೆ.
ಉಪಚುನಾವಣೆಯ ಫಲಿತಾಂಶ ದಿಕ್ಸೂಚಿಯಾಗಲಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಾಯಕರಿಗೂ ಪ್ರತಿಷ್ಠೆಯಾಗಿ ಪರಿಣಮಿಸಿದೆ. ಮುಖ್ಯಮಂತ್ರಿ ಯಡಿಯುರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿ ರಾಜ್ಯಧ್ಯಕ್ಷ ನಳೀನಕುಮಾರ್ ಕಟೀಲ್ ಅವರ ರಾಜಕೀಯ ಭವಿಷ್ಯವನ್ನು ಈ ಫಲಿತಾಂಶ ತೀರ್ಮಾನಿಸಲಿದೆ.
ಬಿಜೆಪಿಯಲ್ಲಿ ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆಯಾಗಲಿದೆ ಎಂಬ ಪುಕಾರಗಳು ಆಗಾಗ್ಗೆ ಕೇಳಿ ಬರುತ್ತಿದ್ದು, ನಾಳೆ ಪ್ರಕಟವಾಗಲಿರುವ ಫಲಿತಾಂಶ ಅವರ ಕುರ್ಚಿಯನ್ನು ಇನ್ನಷ್ಟು ಗಟ್ಟಿ ಮಾಡಲಿದಿಯೇ ? ಇಲ್ಲವೇ ಎಂಬುದು ಸ್ಪಷ್ಟವಾಗಲಿದೆ. ಒಂದು ವೇಳೆ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದರೆ, ಯಡಿಯೂರಪ್ಪ ನಾಯಕತ್ವ ಮತ್ತಷ್ಟು ಗಟ್ಟಿಯಾಗುವುದರಲ್ಲಿ ಸಂದೇಹವೇ ಇಲ್ಲ. ಅಪ್ಪಿತಪ್ಪಿ ವ್ಯತಿರಿಕ್ತ ಫಲಿತಾಂಶ ಬಂದರೆ, ಖಂಡಿತವಾಗಿಯೂ ಕಮಲ ಪಾಳಯದಲ್ಲಿ ಬಿಎಸ್ ವೈ ಹಠಾವೋ ಕೂಗು ಜೋರಾಗಲಿದೆ.
ಇನ್ನು ಪಕ್ಷದಲ್ಲಿ ಹಿಡಿತ ಸಾಧಿಸಲು ಮತ್ತೆ ತೆರೆಮರೆಯಲ್ಲಿ ಕಾರ್ಯತಂತ್ರ ಹೆಣೆಯುತ್ತಿರುವ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮೇಲೂ ಈ ಫಲಿತಾಂಶ ಪರಿಣಾಮ ಬೀರುವುದರಲ್ಲಿ ಸಂಶಯವೇ ಇಲ್ಲ. ಶಿರಾ ಹಾಗೂ ರಾಜರಾಜೇಶ್ವೇರಿ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆದ್ದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅವರ ನಾಯಕಯತ್ವದಲ್ಲೇ ಚುನಾವಣೆ ಎದುರಿಸೋಣ ಎಂಬ ಕೂಗು ಹೆಚ್ಚಾಗಲಿದೆ.
ಕೆಪಿಸಿಸಿ ಅಧ್ಯಕ್ಷರಾದ ನಂತರ ಮೊದಲ ಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್ ಅವರು ಎದುರಿಸುತ್ತಿರುವ ಉಪಸಮರ ಇದಾಗಿದ್ದು, ನಾಳಿನ ಫಲಿತಾಂಶದ ಮೇಲೆ ಅವರ ರಾಜಕೀಯ ಭವಿಷ್ಯವೂ ನಿಂತಿದೆ. ಅಪ್ಪಿ-ತಪ್ಪಿ ಎರಡೂ ಕಡೆ ಕಾಂಗ್ರೆಸ್ ಗೆದ್ದರೆ, ಸಹಜವಾಗಿ ಅದರ ಲಾಭ ಅವರಿಗೆ ದಕ್ಕಲಿದೆ. ಸೋತರೆ ಪಕ್ಷದಲ್ಲಿ ಮತ್ತಷ್ಟು ಬಣಗಳು ಸೃಷ್ಟಿಯಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.
ಸಾಲು ಸಾಲು ನಾಯಕರು ಪಕ್ಷ ಬಿಟ್ಟು ಹೋಗಿರುವ ಕಾರಣ, ಪಕ್ಷದ ಅಸ್ಥಿತ್ವ ಉಳಿಸಿಕೊಳ್ಳಲು ಹೆಣಗಾಡುತ್ತಿರುವ ಜೆಡಿಎಸ್‌ಗೂ ಈ ಚುನಾವಣೆಯ ಫಲಿತಾಂಶ ಅಗ್ನಿಪರೀಕ್ಷೆಯಾಗಿದೆ. ಕಡೆ ಪಕ್ಷ ತನ್ನ ಭದ್ರಕೋಟೆ ಎನಿಸಿದ ಶಿರಾ ಕ್ಷೇತ್ರವನ್ನಾದರೂ ಉಳಿಸಿಕೊಳ್ಳಲು ದಳಪತಿಗಳು ಭಾರೀ ಹರಸಾಹಸ ನಡೆಸಿದ್ದರು. ರಾಜರಾಜೆಶ್ವೇರಿ ನಗರಕ್ಕೀಂತಲೂ ಶಿರಾದಲ್ಲಿ ಗೆದ್ದರೆ, ಜೆಡಿಎಸ್ ಮತ್ತೆ ಪುಟಿದೇಳಬಹುದು. ಎರಡೂ ಕಡೆ ಮತದಾರರಿಂದ ತಿರಸ್ಕೃತವಾದರೆ, ಪಕ್ಷದಲ್ಲಿರುವ ಶಾಸಕರನ್ನು ಉಳಿಸಿಕೊಳ್ಳುವುದೇ ಬಹುದೊಡ್ಡ ಸವಲಾಗಿ ಪರಿಣಮಿಸಲಿದೆ.
ಹೇಗೆ ನೋಡಿದರೂ ಎರಡು ಕ್ಷೇತ್ರಗಳ ಉಪಚುನಾವಣೆ ಮೂರು ಪಕ್ಷಗಳಿಗೂ ಪ್ರತಿಷ್ಠೆಯಾಗಿರುವುದರಲ್ಲಿ ಅನುಮಾನವೇ ಇಲ್ಲ. ಹೀಗಾಗಿ ಈ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದರಿAದಲೇ ಹಿಂದೆAದೂ ಕಾಣದ ಜಾತಿ ,ಜಣ ಜಣ ಕಾಂಚಾಣ ಹಾಗೂ ಪ್ರಭಾವ ಈ ಚುನಾವಣೆಯಲ್ಲಿ ಕೆಲಸ ಮಾಡಿದೆ ಎಂಬ ಮಾತುಗಳು ಕೇಳಿ ಬಂದಿವೆ.
ಶಿರಾದಲ್ಲಿ ಹೆಚ್ಚಿನ ಮತದಾನವಾಗಿರುವುದರಿಂದ ತ್ರಿಕೋನ ಸ್ಪರ್ಧೆ ಇದ್ದರೆ, ಆರ್ ಆರ್ ನಗರದಲ್ಲಿ ಮೂರು ಪಕ್ಷಗಳ ಅಭ್ಯರ್ಥಿಗಳು ಸಮಬಲದ ಹೋರಾಟ ನಡೆಸಿದ್ದಾರೆ. ರಾಜರಾಜೇಶ್ವರಿ ನಗರ, ಮಸ್ಕಿ ಕ್ಷೇತ್ರಗಳ ಶಾಸಕರ ರಾಜೀನಾಮೆಯಿಂದಾಗಿ ತೆರವಾಗಿದ್ದರೂ ನ್ಯಾಯಾಲಯದಲ್ಲಿ ಪ್ರಕರಣಗಳ ಇತ್ಯರ್ಥವಾಗದಿದ್ದ ಕಾರಣ ಉಪಚುನಾವಣೆ ನಡೆಸಿರಲಿಲ್ಲ.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾದರೂ ಮಸ್ಕಿ ಹಾಗೂ ಬಸವ ಕಲ್ಯಾಣ ಕ್ಷೇತ್ರಗಳಿಗೆ ಮುಂದಿನ ದಿನಗಳಲ್ಲಿ ಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇದೆ. ಕೋವಿಡ್ ನಿಂದ ಮೃತಪಟ್ಟ ಶಿರಾ ಮತ್ತು ಬಸವ ಕಲ್ಯಾಣ ಶಾಸಕ ಸತ್ಯನಾರಾಯಣ್ ಮೃತಪಟ್ಟಿದ್ದರು. ಇನ್ನೂ ಎರಡು ವಿಧಾನ ಸಭಾ ಕ್ಷೇತ್ರ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸುವ ಅನಿವಾರ್ಯತೆ ಇದೆ.
ವಿಧಾನಪರಿಷತ್ ಚುನಾವಣೆಯ ಫಲಿತಾಂಶವೂ ರಾಜಕೀಯವಾಗಿ ಮಹತ್ವ ಬದಲಾವಣೆಗೆ ಕಾರಣವಾಗಲಿದೆ. ಆಡಳಿತಾ ರೂಢ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆದ್ದರೆ, ವಿಧಾನ ಪರಿµತ್‌ನಲ್ಲಿ ತನ್ನ ಸಂಖ್ಯಾಬಲವನ್ನು ಹೆಚ್ಚಿಸಿಕೊಳ್ಳಲಿದೆ. ಮುಂದಿನ ದಿನಗಳಲ್ಲಿ ಯಾವುದೇ ಮಸೂದೆ ಅಂಗೀಕಾರ ಪಡೆಯಬೇಕಾದರೆ ಪ್ರತಿಪಕ್ಷಗಳಾಗಿರುವ ಕಾಂಗ್ರೆಸ್ ಮತ್ತು ಜೆಡಿಎಸ್‌ನ ಮರ್ಜಿ ಕಾಯದೇ ಸ್ವತಂತ್ರವಾಗಿ ನಿರ್ಧಾರ ತೆಗೆದುಕೊಳ್ಳುವ ಅವಕಾಶವಿರಲಿದೆ.

LEAVE A REPLY

Please enter your comment!
Please enter your name here