ನಿಗದಿತ ಸ್ಥಳಗಳಲ್ಲಿ ಮಾತ್ರ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ

0
898

ಕಲಬುರಗಿ, ನ. 9: ಅಧಿಕೃತವಾಗಿ ಪರವಾನಿಗೆ ಪಡೆದ ಪಟಾಕಿ ಮಾರಾಟಗಾರರು 2020ರ ನವೆಂಬರ್ 7 ರಿಂದ 16ರವರೆಗೆ ನಿಗದಿಪಡಿಸಿದ ಸ್ಥಳಗಳಲ್ಲಿ ತಾತ್ಕಾಲಿಕವಾಗಿ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆದು ಹಸಿರು ಪಟಾಕಿ ಮಾರಾಟ ಮಾಡಬೇಕು. ಬೇರೆ ಸ್ಥಳಗಳಲ್ಲಿ ಅಂಗಡಿ ತೆರೆಯಬಾರದು. ಸರ್ವೋಚ್ಛ ನ್ಯಾಯಾಲಯವು ಅನುಮತಿ ನೀಡಿದ “ಹಸಿರು ಪಟಾಕಿ”ಗಳನ್ನು ಮಾತ್ರ ಮಾರಾಟ ಮಾಡಬೇಕು. ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳನ್ನು ಮಾರಾಟ ಮಾಡಬಾರದು ಹಾಗೂ ಹಚ್ಚಬಾರದು ಎಂದು ಜಿಲ್ಲಾಧಿಕಾರಿ ವಿವಿ ಜೋತ್ಯಾö್ನ ಅವರು ಹೇಳಿದ್ದಾರೆ.
ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶಗಳಲ್ಲಿ ಮಾತ್ರ ಪಟಾಕಿ ಮಾರಾಟ ಮಳಿಗೆ ಸ್ಥಾಪಿಸಲು ಸಂಬAಧಪಟ್ಟ ಇಲಾಖೆ ಹಾಗೂ ಪ್ರಾಧಿಕಾರಗಳು ಅನುಮತಿ ನೀಡಬೇಕು. ಮಳಿಗೆಗಳಲ್ಲಿ ಎರಡೂ ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು. ಒಂದು ಮಾರಾಟ ಮಳಿಗೆಯಿಂದ ಮತ್ತೊಂದು ಮಾರಾಟ ಮಳಿಗೆಗೆ 6 ಮೀಟರ್ ಅಂತರವಿರಬೇಕು. ಪ್ರತಿಯೊಂದು ಮಳಿಗೆಗಳಲ್ಲಿ ಸಂಬAಧಪಟ್ಟ ಇಲಾಖೆ, ಪ್ರಾಧಿಕಾರದಿಂದ ನೀಡಿರುವ ಪರವಾನಿಗೆ ಪ್ರತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸಬೇಕು. ಪರವಾನಿಗೆ ಪತ್ರವನ್ನು ಪಡೆದವರು ಕಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು.
ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಜೇಶನ್ ಮಾಡಬೇಕು. ಪಟಾಕಿ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಜರ್ ಹಾಗೂ ಥರ್ಮಲ್ ಸ್ಕಿçÃನಿಂಗ್ ವ್ಯವಸ್ಥೆ ಕಲ್ಪಿಸುವ ಜೊತೆಗೆ ಕನಿಷ್ಠ 6 ಅಡಿ ಸಾಮಾಜಿಕ ಅಂತರವನ್ನು ಗುರುತಿಸಿ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಬೇಕು. ಪಟಾಕಿ ಮಾರಾಟ ಮಾಡುವ ವ್ಯಾಪಾರಸ್ಥರು ಮತ್ತು ಖರೀದಿಗೆ ಬರುವ ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು (ಮಾಸ್ಕ್) ಧರಿಸಬೇಕು. ಖರೀದಿ ಸಂದರ್ಭದಲ್ಲಿ ಯಾವುದೇ ರೀತಿಯ ಜನದಟ್ಟಣೆಯಾಗದಂತೆ ನೋಡಿಕೊಳ್ಳಬೇಕು.
ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟಿçÃಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು. ಅಲ್ಲದೇ ಸಾರ್ವಜನಿಕರ ಮತ್ತು ಮಕ್ಕಳ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಆಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆ, ಪಾಲಿಕೆ, ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸಬೇಕು.
ಸರ್ವೋಚ್ಛ ನ್ಯಾಯಾಲಯದ ದಿನಾಂಕ: 23-10-2018 ಹಾಗೂ ದಿನಾಂಕ: 31-10-2018 ಹಾಗೂ ತದನಂತರ ನೀಡಿರುವ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಸಂಬAಧಪಟ್ಟ ಇಲಾಖೆಗಳ ಅಧಿಕಾರಿಗಳು ದೀಪಾವಳಿ ಹಬ್ಬ ಆಚರಣೆ ಸಂಬAಧವಾಗಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಅಗತ್ಯಕ್ರಮಕೈಗೊಳ್ಳಬೇಕು.
ರಾಷ್ಟಿçಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ, ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಅಧಿನಿಯಮ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತು, ಕಾನೂನು ಕ್ರಮ ಹಾಗೂ ಅನ್ವಯವಾಗುಬಹುದಾದ ಇತರೆ ಕಾನೂನು ಉಪಬಂಧಗಳ ಅನ್ವಯ ಕ್ರಮ ಜರುಗಿಸಲಾಗುತ್ತದೆ.

LEAVE A REPLY

Please enter your comment!
Please enter your name here