ಪ್ರಧಾನಿ ಮೋದಿ ವಿಶ್ವಾಸಾರ್ಹ ನಾಯಕ ಜೀವಂತ ನಿದರ್ಶನ ಬಿಹಾರ:ಜಾವಡೇಕರ್

0
947

ನವದೆಹಲಿ, ನ 11: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟದ ಅಭೂತಪೂರ್ವ ವಿಜಯದ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್, ಚುನಾವಣಾ ಫಲಿತಾಂಶವು ಪ್ರಧಾನಿ ನರೇಂದ್ರ ಮೋದಿ ಅತ್ಯಂತ ವಿಶ್ವಾಸಾರ್ಹ ನಾಯಕ ಎಂಬುದನ್ನು ಮತ್ತೊಮ್ಮೆ ತೋರಿಸಿಕೊಟ್ಟಿವೆ ಎಂದು ಹೇಳಿದ್ದಾರೆ.
ಮಂಗಳವಾರ ಪ್ರಕಟವಾದ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶಗಳAತೆ, ಲಾಲು ಪ್ರಸಾದ ಯಾದವ್ ಅವರ ಪುತ್ರ ತೇಜಶ್ವಿ ಯಾದವ್ ನೇತೃತ್ವದ ಮಹಾಮೈತ್ರಿಕೂಟವನ್ನು ಸೋಲಿಸಿರುವ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ರಾಜ್ಯದಲ್ಲಿ ಮತ್ತೆ ಅಧಿಕಾರ ಗದ್ದುಗೆಗೆ ಏರುತ್ತಿದೆ.
ಬಿಹಾರವಲ್ಲದೆ, ಭಾರತೀಯ ಜನತಾ ಪಾರ್ಟಿ, ಗುಜರಾತ್, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಇತರ ರಾಜ್ಯಗಳಲ್ಲಿ ನಡೆದ ಉಪಚುನಾವಣೆಗಳಲ್ಲೂ ಅಭೂತಪೂರ್ವ ಗೆಲುವು ದಾಖಲಿಸಿದೆ.
‘ದೇಶಾದ್ಯಂತ ವಿವಿಧ ರಾಜ್ಯಗಳಲ್ಲಿ ನಡೆದ ಚುನಾವಣೆಗಳ ಫಲಿತಾಂಶದಿAದ ಪ್ರಧಾನಿ ಮೋದಿ ಅತ್ಯಂತ ವಿಶ್ವಾಸಾರ್ಹ ನಾಯಕರೆಂಬುದು ಸಾಬೀತಾಗಿದೆ. ಮೋದಿಯವರು ದೇಶದ ಜನರ ಅಪಾರ ಪ್ರೀತಿ ಮತ್ತು ಬೆಂಬಲವನ್ನು ಗಳಿಸಿದ್ದಾರೆ.’ ಎಂದು ಜಾವಡೇಕರ್ ಟ್ವೀಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here