ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ

  0
  1094

  ಬೆಂಗಳೂರು, ನ. 11: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಹೇಳುವ ಮೂಲಕ ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಅವರು ನಾಯಕತ್ವ ಕುರಿತು ಎದ್ದಿರುವ ಊಹಾಪೋಹಗಳಿಗೆ ನಾಂದಿ ಹಾಡಿದ್ದಾರೆ.
  ಕಳೆದ ಹಲವಾರು ದಿನಗಳಿಂದ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯನವರು ರಾಜ್ಯದಲ್ಲಿ ಯಡಿಯೂರಪ್ಪ ಅವರನ್ನು ಬದಲಿಸಿ ಬೇರೊಬ್ಬ ಮುಖ್ಯಮಂತ್ರಿಗಳು ಬಿಜೆಪಿ ಮಾಡಲಿದೆ ಎಂದು ಹೇಳಿಕೆಗೆ ಅವರು ಪ್ರತಿಕ್ರಿಯಿಸಿ, ಯಾವುದೇ ಕಾರಣಕ್ಕೂ ಬಿಎಸ್ವೆöÊನೆ ಕರ್ನಾಟಕದ ಸಿಎಂ ಆಗಿದ್ದು, ಮುಂದಿನ ಮೂರು ವರ್ಷಗಳ ಅವಧಿಗೆ ಅವರೇ ಮುಂದುವರೆಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
  ಉಪ ಚುನಾವಣೆಯ ಫಲಿತಾಂಶ ಬಳಿಕ ಈ ತಿಂಗಳು 18ರೊಳಗೆ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಯಾಗಲಿದೆ ಎಂಬ ವಿರೋಧ ಪಕ್ಷಗಳ ರೆಕ್ಕೆಪುಕ್ಕವಿಲ್ಲದ ಹೇಳಿಕೆಯಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

  LEAVE A REPLY

  Please enter your comment!
  Please enter your name here