2022ರ ಹೊತ್ತಿಗೆ ಕೇಂದ್ರ ಸರ್ಕಾರದ ಸಮಾನ ವೇತನ ರಾಜ್ಯ ಸರಕಾರಿ ನೌಕರರಿಗೆ ಜಾರಿಗೆ ಪ್ರಮಾಣಿಕ ಪ್ರಯತ್ನ

0
939

ಕಲಬುರಗಿ:ಡಿ.1: ದೇಶದಲ್ಲಿ ಸುಮಾರು 20ಕ್ಕೂ ಹೆಚ್ಚು ರಾಜ್ಯಗಳಲ್ಲಿ ಸರ್ಕಾರಿ ನೌಕರರಿಗೆ ಕೇಂದ್ರ ಸಮಾನ ವೇತನ ನೀಡಲಾಗುತ್ತಿದ್ದು, ರಾಜ್ಯದಲ್ಲಿಯೂ 2022ರ ಹೊತ್ತಿಗೆ ಜಾರಿಗೊಳಿಸಲು ಪ್ರಮಾಣಿಕ ಪ್ರಯತ್ನ ಮಾಡುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು.
ಮಂಗಳವಾರ ಕಲಬುರಗಿ ನಗರದ ಡಾ.ಎಸ್.ಎಂ.ಪAಡಿತ್ ರಂಗಮAದಿದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಕಲಬುರಗಿ ಜಿಲ್ಲಾ ಘಟಕದಿಂದ ಆಯೋ ಜಿಸಿದ “ರಾಷ್ಟ್ರೀಯ ಶಿಕ್ಷಣ ನೀತಿ-2020 ಅನುಷ್ಠಾನದಲ್ಲಿ ಶಿಕ್ಷಕರ ಪಾತ್ರ ಕುರಿತು ವಿಚಾರ ಸಂಕಿರಣ ಹಾಗೂ ನೌಕರರು-ಶಿಕ್ಷಕರೊಂದಿಗೆ ಸಂವಾದ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಕೇಂದ್ರ ಸರ್ಕಾರ ತನ್ನ ನೌಕರರಿಗೆ ನೀಡಲಾಗುತ್ತಿರುವ ವೇತನ ಗಮನಿಸಿದಲ್ಲಿ ರಾಜ್ಯದಲ್ಲಿ ಗುಮಾಸ್ತನಾಗಿ ಕಾರ್ಯನಿ ರ್ವಹಿಸುತ್ತಿರುವ ಸಿಬ್ಬಂದಿಗಳು 20 ರಿಂದ 35 ಸಾವಿರ ರೂ. ಮತ್ತು ಅಧಿಕಾರಿಗಳು 50 ರಿಂದ 1 ಲಕ್ಷ ರೂ. ವರೆಗೆ ಕಡಿಮೆ ವೇತನ ಪಡೆಯುತ್ತಿದ್ದಾರೆ. ಈ ತಾರತಮ್ಯ ಸರಿಪಡಿಸಲು ಕೇಂದ್ರ ಸರ್ಕಾರ ತನ್ನ ನೌಕರರಿಗೆ ನೀಡುವಂತೆ ಸಮಾನ ವೇತನವನ್ನು ರಾಜ್ಯ ಸರ್ಕಾರಿ ನೌಕರರಿಗೆ ನೀಡಲು ಶಕ್ತಿ ಮೀರಿ ಪ್ರಯತ್ನಿಸಲಾಗುವುದು. ರಾಜ್ಯದಲ್ಲಿರುವ 3 ಲಕ್ಷ ಶಿಕ್ಷಕ ಸಮುದಾಯ ಮತ್ತು ಇತರೆ ಇಲಾಖೆಯ ನೌಕರರು ಒಟ್ಟಾಗಿ ಸಂಘಟಿತಗೊAಡಲ್ಲಿ ಇದು ಕಷ್ಠ ಸಾಧ್ಯವಲ್ಲ ಎಂದು ಅವರು ಅಭಿಪ್ರಾಯ ಪಟ್ಟರು.ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಕೇಂದ್ರ ಸಂಘದ ಉಪಾಧ್ಯಕ್ಷರಾದ ಮೋಹನ, ಮಲ್ಲಿಕಾರ್ಜುನ ಬಳ್ಳಾರಿ, ಖಜಾಂಚಿ ಶ್ರೀನಿವಾಸ, ವಿಜಯಪುರ ಜಿಲ್ಲಾಧ್ಯಕ್ಷ ಸುರೇಶ ಷಡಶ್ಯಾಳ, ಯಾದಗಿರಿ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಪಾಟೀಲ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಮೇಶ ಸಂಗಾ, ಕಲಬುರಗಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ವೆಂಕಟರಾವ ಇಟಗಿ, ರಾಜ್ಯ ಪರಿಷತ್ ಸದಸ್ಯ ಹಣಮಂತರಾಯ ಗೊಳಸಾರ, ಉಪಾಧ್ಯಕ್ಷ ಬಾಬು ಮೌರ್ಯ, ರಾಜ್ಯ ಸಂಘಟನಾ ಕಾರ್ಯದರ್ಶಿ ಸಿದ್ಧಲಿಂಗಯ್ಯ ಮಠಪತಿ, ಕೇಂದ್ರ ಸಂಘದ ಸದಸ್ಯ ಗಣೇಶ ಕಮ್ಮಾರ, ಕ.ರಾ.ಪ್ರಾ.ಶಾ.ಶಿ. ಸಂಘದ ಕಲಬುರಗಿ ಜಿಲ್ಲೆಯ ಪ್ರದಾನ ಕಾರ್ಯದರ್ಶಿ ಸಿದ್ದರಾಮ ಗುಣಾರಿ ಸೇರಿದಂತೆ ಜಿಲ್ಲಾ ಘಟಕದ ನೌಕರ ಸಂಘದ ಪದಾಧಿಕಾರಿಗಳು ವಿವಿಧ ತಾಲೂಕಿನ ಅಧ್ಯಕ್ಷರು, ಶಿಕ್ಷಕರ ಸಂಘದ ಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಗಳ ಸಂಘದ ಪ್ರತಿನಿಧಿಗಳು ಸೇರಿದಂತೆ ಇನ್ನಿತರರು ಇದ್ದರು.
ತದನಂತರ ನಡೆದ ಸಂವಾದಲ್ಲಿ ಶಿಕ್ಷಕರ ಪ್ರಶ್ನೆಗೆ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಉತ್ತರಿಸಿದರು. ಇದಕ್ಕು ಮುನ್ನ ರಾಜ್ಯಾಧ್ಯಕ್ಷ ಸಿ.ಎಸ್.ಷಡಕ್ಷರಿ ಅವರನ್ನು ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ರಂಗಮAದಿರ ವರೆಗೆ ತೆರೆದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು.
ಇದೇ ಸಂದರ್ಭದಲ್ಲಿ ರಾಷ್ಟç ಪ್ರಶಸ್ತಿ ವಿಜೇತೆ ಶಿಕ್ಷಕಿ ಸುರೇಖಾ ಜಗನ್ನಾಥ ಡೆಂಗಿ ಸೇರಿದಂತೆ ವಿವಿಧ ಇಲಾಖೆಯ ಸಾಧಕ ನೌಕರರನ್ನು ಸನ್ಮಾನಿಸಲಾಯಿತು.

LEAVE A REPLY

Please enter your comment!
Please enter your name here