ಡಾ. ಬಿ.ಆರ್. ಅಂಬೇಡ್ಕರ್‌ರವರ ತತ್ವಗಳನ್ನು ಜೀವನದಲ್ಲಿ ಅಳವಡಿಕೊಳ್ಳಲು ಡಿಸಿ ಕರೆ

0
830

ಕಲಬುರಗಿ,ಡಿ.6-ದೇಶಕ್ಕೆ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು, ಅಲ್ಲದೇ ಅವರು ತೋರಿದ ಸನ್ಮಾರ್ಗದಲ್ಲಿಯೇ ನಾವೇಲ್ಲರೂ ಸಾಗಬೇಕಿದೆ, ಅವರು ಹಾಕಿಕೊಟ್ಟಿರುವ ದಾರಿಯಲ್ಲಿ ನಾವೆಲ್ಲರು ಸಾಗ ಬೇಕಿದೆ ಅಲ್ಲದೇ ಅವರು ದೇಶಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ವಿ. ವಿ. ಜ್ಯೋತ್ಸಾ÷್ನ ಹೇಳಿದರು.
ಅವರಿಂದಿಲ್ಲಿ 64ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ಜಗತ್ ವೃತ್ತದ ಬಳಿಯಿರುವ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತ ಮೇಲಿನಂತೆ ಹೇಳಿದರು.
ನಗರ ಪೊಲೀಸ್ ಆಯುಕ್ತ ಎನ್. ಸತೀಶಕುಮಾರ, ಜಿಲ್ಲಾ ಪೊಲಿ ಸ್ ವರಿಷ್ಠಾಧಿಕಾರಿ ಡಾ. ಸಿಮಿ ಮರಿಯಮ್ ಜಾರ್ಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪಿ. ರಾಜಾ, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ, ಸಮಾಜ ಕಲ್ಯಾಣ ಇ ಲಾಖೆಯ ಜಂಟಿ ನಿರ್ದೇಶಕ ಅಲ್ಲಾ ಭಕ್ಷ ಸಹ ಮಹಾ ಮಾನವತಾವಾದಿಗೆ ಗೌರವ ನಮನ ಸಲ್ಲಿಸಿದರು.
ಮಹಾನಗರ ಪಾಲಿಕೆಯ ಸಮುದಾಯ ಸಂಘಟನಾಧಿಕಾರಿ ಡಾ. ನಾಗರತ್ನ ಬಿ. ದೇಶಮಾನೆ, ಎಸ್‌ಸಿ.ಎಸ್‌ಟಿ. ನೌಕರರ ಸಂಘದ ಬಾಬು ಮೌರ್ಯ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಎಸ್.ಸಿ.ಎಸ್.ಟಿ ನೌಕರರ ಸಂಘಟನೆಯ ಪದಾಧಿಕಾರಿಗಳು ಮತ್ತು ವಿವಿಧ ಸಮಾಜದ ಮುಖಂಡರು ಇದ್ದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸಾ÷್ನ ಅವರು ಪಂಚಶೀಲ ಧ್ವಜಾರೋಹಣ ಮತ್ತು ಜಿಲ್ಲಾ ಪಂಚಾಯತ್ ಸಿ.ಇ.ಓ. ಡಾ.ಪಿ.ರಾಜಾ ಅವರು ನೀಲಿ ಧ್ವಜಾರೋಹಣ ಮಾಡಿದರು.
ಸಿದ್ದಾರ್ಥ ವಿಹಾರ ಟ್ರಸ್ಟಿನ ಪೂಜ್ಯ ಸಂಘಾನAದ ಭಂತೇಜಿ ಅವರು ಸಂವಿಧಾನ ಶಿಲ್ಪಿಗೆ ಬುದ್ಧ ವಂದನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here