ಗ್ರಾ.ಪಂ. ಚುನಾವಣೆ ಅಭ್ಯರ್ಥಿಗಳಿಗೆ ಆಯೋಗದ ಖಡಕ ಸೂಚನೆ

0
1056

ಬೆಂಗಳೂರು, ಡಿ. 12: ಗ್ರಾಮ ಪಂಜಾಯತಿ ಚುನಾವಣೆಗಳು ಪಕ್ಷಾತೀತವಾಗಿದ್ದು, ರಾಜಕೀಯ ಪಕ್ಷಗಳುಈ ಚುನಾವಣೆಯಲ್ಲಿಯೂ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುವ, ಸಭೆ ಸಮಾರಂಭಗಳನ್ನು ನಡೆಸುವ, ರಾಜಕೀಯ ಮುಖಂಡರುಗಳ ಭಾವಚಿತ್ರಗಳನ್ನು ಕರ ಪತ್ರಗಳಲ್ಲಿ ಮುದ್ರಿಸಿ ಪಕ್ಷಗಳ ಬಾವುಟ ಮತ್ತು ಚಿಹ್ನೆಯನ್ನು ಬಳಸಿಕೊಂಡು ಪ್ರಚಾರ ಮಾಡುವದನ್ನು ರಾಜ್ಯ ಚುನಾವಣಾ ಆಯೋಗವು ತಡೆಗೆ ಖಡಕ ಎಚ್ಚರಿಕೆ ನೀಡಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ7(2)ರಂತೆ ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ.
ರಾಜಕೀಯ ಪಕ್ಷಗಳು ಸಭೆ, ಸಮಾರಂಭಗಳನ್ನು ಏರ್ಪಡಿಸಿ, ವೇದಿಕೆಯ ಮೇಲೆ ಪಕ್ಷದಬಾವುಟ, ಬ್ಯಾನರ್‌ಗಳನ್ನು ಬಳಸುವಂತಿಲ್ಲ. ಸ್ಪರ್ಧಿಸುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ/ ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸುವುದು ಹಾಗೂ ಅವರ ಪರವಾಗಿ ಮತ ನೀಡಲು ಮತದಾರರನ್ನು ಕೋರುವಂತಿಲ್ಲ.ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು, ರಾಜಕೀಯ ಮುಖಂಡರ ಭಾವಚಿತ್ರ/ ಪಕ್ಷದ ಚಿಹ್ನೆ ಇರುವ ಕರಪತ್ರಗಳನ್ನು ಮುದ್ರಿಸುವುದು/ಹ0ಚುವುದು ಮಾಡುವಂತಿಲ್ಲ.
ರಾಜಕೀಯ ಮುಖಂಡರ ಭಾವಚಿತ್ರ ರಾಜಕೀಯ ಪಕ್ಷಗಳ ಚಿಹ್ನೆ ಇರುವ ಕರಪತ್ರಗಳು,
ಕಟೌಟ್‌ಗಳು, ಬ್ಯಾನರ್ ಮತ್ತು ಬಂಟಿAಗ್‌ಗಳ ಮೂಲಕ ಪ್ರಚಾರ ಮಾಡುವಂತಿಲ್ಲ ಎಂದು ರಾಜ್ಯ ಚುನಾವಣಾ ಆಯೋಗವು ಎಲ್ಲ ಎಚ್ಚರಿಕೆ ನೀಡಿದೆ.
ಅಲ್ಲದೇ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಟಿ.ವಿ. ಮಾಧ್ಯಮಗಳು, ಪತ್ರಿಕೆಗಳ ಮೂಲಕ ರಾಜಕೀಯ ಮುಖಂಡರ ಭಾವಚತಿರ ಮತ್ತು ಪಕ್ಷಗಳ ಚಿಹ್ನೆಯನ್ನು ಬಳಸಿ ಜಾಹೀರಾತು ನೀಡುವಂತಿಲ್ಲ ಎಂದು ತಿಳಿಸಿದ್ದು, ಈ ಮೇಲಿ ತಿಳಿಸಿರುವ ಪ್ರಕರಣಗಳು ಗ್ರಾಮ ಪಂಚಾಯತಿ ಚಉನಾವಣೆಯಲ್ಲಿ ಉಲ್ಲಂಘಟನೆಯಾಗಿರುವುದು ಕಂಡು ಬಂದಲ್ಲಿ ಅಂತಹ ಚುನಾವಣಾ ಪ್ರಚಾರ ಸಾಮಾಗ್ರಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಹಾಗೂ ಅಂತಹವರ ವಿರುದ್ಧ ಕಟ್ಟುನಿಟ್ಟಿ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಿಗೆ ರಾಜ್ಯ ಚುನಾವಣಾ ಆಯೋಗದ ಆಧಿನ ಕಾರ್ಯದರ್ಶಿಗಳು ನಿರ್ದೇಶನ ನೀಡಿದ್ದಾರೆ.

LEAVE A REPLY

Please enter your comment!
Please enter your name here