ಕಲಬುರಗಿ.ಡಿ. 21:ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯ ಕಲಬುರಗಿ ಜಿಲ್ಲೆಯ ಕಲಬುರಗಿ, ಆಳಂದ, ಅಫಜಲಪೂರ, ಕಮಲಾಪೂರ, ಕಾಳಗಿ ಹಾಗೂ ಶಹಾಬಾದ ತಾಲೂಕಿನ ಗ್ರಾಮ ಪಂಚಾಯತಿಗಳಿಗೆ ಮಂಗಳವಾರ ನಡೆಯುವ ಪ್ರಥಮ ಹಂತದ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಸೋಮವಾರ ಇಲ್ಲಿನ ಸರ್ಕಾರಿ ಪಾಲಿಟೆಕ್ನಿಕ್ ಮಸ್ಟರಿಂಗ್ ಕಂ ಡಿ-ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿದರು.
ಚುನಾವಾಣಾ ಕಾರ್ಯಕ್ಕೆ ನಿಯೋಜಿಸಿದ ಸಿಬ್ಬಂದಿಗಳು ಸುರಕ್ಷಿತವಾಗಿ ಮತಪೆಟ್ಟಿಗೆ ಸೇರಿದಂತೆ ಅಗತ್ಯ ಸಾಮಗ್ರಿಗಳನ್ನು ಮತದಾನ ಕೆಂದ್ರಕ್ಕೆ ಒಯ್ಯಬೇಕು. ಈ ನಿಟ್ಟಿನಲ್ಲಿ ಸೆಕ್ಟರ್ ಮತ್ತು ರೂಟ್ ಅಧಿಕಾರಿಗಳುಮೇಲುಸ್ತುವಾರಿ ವಹಿಸಬೇಕು. ಎಲ್ಲಾ ಚುನಾವಣಾ ಸಿಬ್ಬಂದಿ ಮತದಾನ ಕೇಂದ್ರಕ್ಕೆ ತಲುಪಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಇದಲ್ಲದೆ ಇಲ್ಲಿಯೆ ಕಲಬುರಗಿ ತಾಲೂಕಿನ ಮತ ಎಣಿಕೆ ಕಾರ್ಯ ನಡೆಯುವುದರಿಂದ ಸ್ಟ್ರಾಂಗ್ ರೂಮ್ ಸಹ ಡಿ.ಸಿ. ಅವರು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಕಲಬುರಗಿ ಉಪ ವಿಭಾಗದ ಸಹಾಯಕ ಆಯುಕ್ತ ಬಲರಾಮ ಲಮಾಣಿ, ಕಲಬುರಗಿ ತಹಶೀಲ್ದಾರ ಸಂಗಯ್ಯ ಸ್ವಾಮಿ ಇತರರು ಇದ್ದರು.