ಕಲಬುರಗಿ,ಡಿ.27-ಕಾಂಗ್ರೆಸ್ ಪಕ್ಷದ ಸಂಸ್ಥಾಪನಾ ದಿನವನ್ನು ಡಿ.28 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಆಚರಣೆ ಮಾಡಲಾಗುವದು ಎಂದು ಪಕ್ಷದ ಜಿಲ್ಲಾಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಸಂವಿಧಾನದ ಮುನ್ನುಡಿಯನ್ನು ಓದಿ ಪ್ರತಿಜ್ಞಾ ಪ್ರತಿ ಸ್ವೀಕರಿಸುವ ಹಾಗೂ ಪಕ್ಷದ ಹಿರಿಯ ಮುಖಂಡರು ಕಾಂಗ್ರೆಸ್ ಪಕ್ಷದ ಇತಿಹಾಸ, ಹೋರಾಟ ಮತ್ತು ಕೊಡುಗೆಗಳ ಕುರಿತು ಮಾತನಾಡವರು ಎಂದು ಜಗದೇವ ಗುತ್ತೇದಾರ ಅವರು ವಿವರಿಸಿದರು.
ಹಿರಿಯ ನಾಗರಿಕರು ಮತ್ತು ಹಿರಿಯ ಮುಖಂಡರನ್ನು ಸನ್ಮಾನಿಸಲಾಗುವದು. ಆದ್ದರಿಂದ ಪಕ್ಷದ ಹಾಲಿ ಹಾಗೂ ಮಾಜಿ ಸಂಸದರು, ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷರು, ಡಿಸಿಸಿ ಡೇಲಿಗೇಟ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಸಮಿತಿ ವಿವಿಧ ಮೂಂಚೂಣಿ ಘಟಕ, ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್, ತಾಲೂಕಾ ಪಂಚಾಯತ್, ಗ್ರಾಮ ಪಂಚಾಯತ್, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್, ಎಪಿಎಂಸಿಯ ಹಾಲಿ ಹಾಗೂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳು, ಮಹಾ ನಗರ ಪಾಲಿಕೆಯ ಮಾಜಿ ಪೂಜ್ಯ ಮಹಾಪೌರರು, ಉಪ ಮಹಾಪೌರರು, ಸದಸ್ಯರುಗಳು, ಮಹಿಳೆಯರು, ಯುವಕರು ಕಾಂಗ್ರೆಸ್ ಪಕ್ಷದ ಎಲ್ಲಾ ಮುಖಂಡರು, ಹಿರಿಯರು, ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಅವರು ಕೋರಿದ್ದಾರೆ.
Home Uncategorized 28ರಂದು ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ: ಹಿರಿಯ ನಾಗರಿಕರು, ಮುಖಂಡರುಗಳಿಗೆ ಸನ್ಮಾನ : ಗುತ್ತೇದಾರ