ಶಿಕ್ಷಕರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವೆ

0
889

ಕಲಬುರಗಿ: ಜಿಲ್ಲೆಯ ಪ್ರಾಥಮಿಕ ಶಾಲೆಯ ಎಲ್ಲಾ ಶಿಕ್ಷಕ ಭಾಂದವರು ನನ್ನನ್ನು ಎರಡನೇ ಬಾರಿಗೆ ಸಂಘದ ಜಿಲ್ಲಾಧ್ಯಕ್ಷನಾಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. ತಮ್ಮ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕವಾಗಿ ಸ್ಪಂದಿಸುತ್ತೇನೆAದು ಎರಡನೇ ಬಾರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಪುನರಾಯ್ಕ್ಕೆಯಾದ ಮಲ್ಲಯ್ಯ ಗುತ್ತೇದಾರ ಹೇಳಿದರು.
ನಗರದ ಆಳಂದ ರಸ್ತೆಯಲ್ಲಿರುವ ಬಸವೇಶ್ವರ ಕಾನ್ವೆಂಟ್ ಶಾಲೆಯಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳು ಮತ್ತು ಬಡ್ತಿ ಹೊಂದಿದ ಮುಖ್ಯ ಶಿಕ್ಷಕರಿಗೆ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಗೌರವ ಸತ್ಕಾರ ಕಾರ್ಯಕ್ರಮದಲ್ಲಿ ಸನ್ಮಾನವನ್ನು ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.
ಶಿಕ್ಷಣ ವ್ಯವಸ್ಥೆಯಲ್ಲಿ ಪ್ರಾಥಮಿಕ ಶಿಕ್ಷಕರ ಪಾತ್ರ ಪ್ರಮುಖವಾಗಿದೆ. ನಾವೆಲ್ಲರೂ ಜೊತೆಗೂಡಿ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸುವ ಮೂಲಕ ಶೈಕ್ಷಣಿಕ ವ್ಯವಸ್ಥೆಗೆ ಭದ್ರ ಬುನಾದಿ ಒದಗಿಸೋಣ. ಸಾಧಕರನ್ನು ಗುರ್ತಿಸಿ ಪ್ರೋತ್ಸಾಹಿಸುವ ಕಾರ್ಯವನ್ನು ನಿರಂತರವಾಗಿ ಹತ್ತು-ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಬಸವೇಶ್ವರ ಸಮಾಜ ಸೇವಾ ಬಳಗವು ನಮ್ಮ ಭಾಗದಲ್ಲಿ ತನ್ನದೆ ಆದ ಛಾಪನ್ನು ಮೂಡಿಸಿದೆಯೆಂದು ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
ಶಿಕ್ಷಕರ ಸಂಘಕ್ಕೆ ಆಯ್ಕೆಯಾದ ಚಂದ್ರಶೇಖರ ಪೂಜಾರಿ, ನರಸಪ್ಪ ಬಿರಾದಾರ ದೇಗಾಂವ, ಅಣ್ಣಾರಾಯ ಮಂಗಾಣೆ, ದೇವೇಂದ್ರಪ್ಪ ಗಣಮುಖಿ, ಶೆಟ್ಟೆಪ್ಪ ಪೋತೆ, ಮುಖ್ಯ ಶಿಕ್ಷಕ ಹುದ್ದೆಗೆ ಬಡ್ತಿ ಹೊಂದಿದ ನಿಂಗಪ್ಪ ಸಿ.ಮಂಗೊAಡಿ, ವಿಜಯಕುಮಾರ ಪೋಮಾಜಿ, ಶರಣಪ್ಪ ವಗ್ಗಾಲೆ, ಚಾರ್ಟೆಡ್ ಅಕೌಂಟೆAಟ್ ರಾಜೇಂದಗೌಡ ಮರಿಗೌಡರ್‌ಅವರಿಗೆ ಸತ್ಕರಿಸಲಾಯಿತು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಎಚ್.ಬಿ.ಪಾಟೀಲ, ರಾಜಶೇಖರ ಬಿ.ಮರಡಿ, ಸೋಮಶೇಖರ ಬಿ.ಮೂಲಗೆ, ಬಸಯ್ಯಸ್ವಾಮಿ ಹೊದಲೂರ, ಬಸವರಾಜ ಎಸ್.ಪುರಾಣೆ, ವೀರೇಶ ಬೋಳಶೆಟ್ಟಿ ನರೋಣಾ, ರಾಜಕುಮಾರ ಬಟಗೇರಿ, ಅಖಿಲ್ ಪೇರಾಲ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Total Page Visits: 975 - Today Page Visits: 2

LEAVE A REPLY

Please enter your comment!
Please enter your name here