ಕಲಬುರಗಿ, ಜ. 16: ಕೊರೊನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಶನಿವಾರ ಕಲಬುರಗಿಯ ವೈದ್ಯಕೀಯ ವಿಜ್ಞಾನ ಮಹಾ ವಿದ್ಯಾಲಯದಲ್ಲಿ ಜೀಮ್ಸ್ ಆಸ್ಪತ್ರೆಯ ಡಿಗ್ರೂಪ್ ನೌಕರ ಅನಂತರಾಜ್‌ಗೆ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು.
ಇಲ್ಲಿನ ಜೀಮ್ಸ್ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಲಸಿಕೆ ನೀಡುವ ಪ್ರಕ್ರಿಯೆ ನಡೆಯುತ್ತಿದ್ದು, ಇಂದು ಸುಮಾರು ನೂರು ಜನ ಡಿ. ಗ್ರೂಪ್ ನೌಕರರು ಸೇರಿದಂತೆ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುವುದು.
ಅಲ್ಲದೇ ಮುಂದೇ ಹಂತ ಹಂತವಾಗಿ ಶಿಕ್ಷಣ ಇಲಾಖೆ, ಪೋಲಿಸ್ ಇಲಾಖೆ, ಅಲ್ಲದೇ ಕೋವಿಡ್ ಪ್ರಂಟ್‌ಲೈನ್ ವಾರಿಯಸ್ಸ್ಗೆ ಲಸಿಕೆ ನೀಡಿದ ಬಳಿಕ 50 ವರ್ಷ ಮೇಲ್ಪಟ್ಟವರಿಗೆ ಈ ಲಸಿಕೆ ನೀಡಲಾಗುವುದು.
ಮುಂದಿನ ಹಂತವಾಗಿ ಸಾರ್ವಜನಿಕರಿಗೂ ಕೂಡ ಈ ಲಸಿಕೆ ಉಚಿತವಾಗಿ ನೀಡಲು ಜಿಲ್ಲಾಡಳಿತ ವ್ಯವಸ್ಥೆ ಮಾಡುತ್ತಿದೆ.
ಲಸಿಕೆ ನೀಡುವ ಪ್ರಕ್ರಿಯೆ ಚಾಲನೆ ನೀಡಿದ ಸಂಸದ ಡಾ. ಉಮೇಶ ಜಾಧವ, ಶಾಸಕರುಗಳಾದ ದತ್ತಾತ್ರೇಯ ಪಾಟೀಲ್ ರೇವೂರ, ಬಸವರಾಜ ಮತ್ತಿಮೂಡ, ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ್, ಜಿ.ಪಂ. ಅಧ್ಯಕ್ಷೆ ಶ್ರೀಮತಿ ಸುವರ್ಣ ಮಾಲಾಜಿ, ಜಿಲ್ಲಾಧಿಕಾರಿ ವಿವಿ ಜೋತ್ಸಾö್ನ, ಡಿಎಚ್.ಓ. ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.