ಕಲಬುರಗಿ: ದೇಶದ. 72ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ ಕತ್ತಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ನಗರದ ಪೊಲೀಸ್ ಪರೇಡ ಮೈದಾನದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಧ್ವಜಾರೋಹಣ ನೆರವೇರಿಸಿ ಪರೇಡ ಕಮಾಂಡರ್ ಮತ್ತು ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.
ನಂತರ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಹಂತ- ಹಂತವಾಗಿ ಸರ್ಕಾರದ ಮಾರ್ಗಸೂಚಿಯಂತೆ ವಿವಿಧ ವರ್ಗದವರಿಗೆ ಕೋವಿಡ್ ಲಸಿಕೆ ನೀಡಲಾಗುತ್ತದೆ. ಈ ಮೂಲಕ ಕೊವಿಡ್ ಮಹಾಮಾರಿ ಕೆಲವೇ ದಿನಗಳಲ್ಲಿ ಕಣ್ಮರೆಯಾಗಲಿದೆ ಎಂದು ದೃಢ ವಿಶ್ವಾಸ ವ್ಯಕ್ತ ಪಡಿಸಿದರು.
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ನಿಟ್ಟಿನಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 2020-21ನೇ ಸಾಲಿನಲ್ಲಿ ಸರ್ಕಾರವು 1132 ಕೋ. ರೂ ಅನುದಾನ ನಿಗದಿಪಡಿಸಿ ಇದೇ ಜನೇವರಿ 2ರಂದು ಅನುಮೋದನೆ ನೀಡಲಾಗಿರುತ್ತದೆ ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಕಲಬುರಗಿ ವಿಮಾನ ನಿಲ್ದಾಣದ ಲ್ಲಿ ರಾತ್ರಿ ವೇಳೆಯೂ ವಿಮಾನ ಸಂಚಾರ ಶುರುವಾಗಲಿದ್ದು, ವಿಮಾನ ನಿಲ್ದಾಣ ಪ್ರಾರಂಭದಿಂದ ಕಲ್ಯಾಣ ಕರ್ನಾಟಕ ಭಾಗದ ಕೈಗಾರಿಕಾ ಅಭಿವೃದ್ಧಿ ಗೆ ಪೂರಕವಾಗಲಿದೆ ಎಂದು ಸಚಿವ ಕತ್ತಿ ಹೇಳಿದರು.
ಕೆಕೆಆರ್ ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವೂರ, ಸಂಸದ ಡಾ. ಉಮೇಶ ಜಾಧವ್, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಅಧ್ಯಕ್ಷ ರಾಗಿರುವ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣ ಮಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ವಿಧಾನ ಪರಿಷತ್ ಸದಸ್ಯ ರಾದ ಸುನೀಲ್ ವಲ್ಲಾಪುರೆ, ಶಶೀಲ್ ನಮೋಶಿ, ಪ್ರಾದೇಶಿಕ ಆಯುಕ್ತ ಎನ್. ವಿ. ಪ್ರಸಾದ, ಜಿಲ್ಲಾಧಿಕಾರಿ ವಿ.ವಿ. ಜೋತ್ಸ್ಯಾ ಸೇರಿದಂತೆ ಮುಂತಾದವರಿದ್ದರು.
Home Featured Kalaburagi ಕಲಬುರಗಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಕತ್ತಿ ಹಂತ- ಹಂತವಾಗಿ ವಿವಿಧ ವರ್ಗದವರಿಗೆ ಕೊವಿಡ್ ಲಸಿಕೆ ನೀಡಿಕೆ...