ನೆರೆ ರಾಜ್ಯಗಳಲ್ಲಿ ಕೊರೊನಾ ಉಲ್ಬಣ ಕಟ್ಟುನಿಟ್ಟಿನ ಕ್ರಮಕ್ಕೆ ಕಾರಜೋಳ ಸೂಚನೆ

0
1016

ಬೆಂಗಳೂರು. ಫೆ.20:ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ, ಕೇರಳ ರಾಜ್ಯಗಳಲ್ಲಿ ಕೊರೋನಾ ರೋಗವು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಕಾರ್ಯವನ್ನು ತೀವ್ರಗೊಳಿಸಿ, ಕಟ್ಟುನಿಟ್ಟಾಗಿ ತಪಾಸಣೆಗೊಳಪಡಿಸಲು ಕ್ರಮಕೈಗೊಳ್ಳುವಂತೆ ಕೋರಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಮುಖ್ಯಕಾರ್ಯದರ್ಶಿವರಿಗೆ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಪತ್ರ ಬರೆದಿದ್ದಾರೆ.
ನೆರೆ ರಾಜ್ಯಗಳಲ್ಲಿ ಕೊರೊನಾ ಉಲ್ಬಣ ವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಗಡಿ ಜಿಲ್ಲೆಗಳಾದ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳ ಅನೇಕ ತಾಲೂಕು ಗಳು ನೆರೆ ರಾಜ್ಯಗಳಿಗೆ ಹೊಂದಿಕೊoಡಿವೆ. ಸಾರ್ವಜನಿಕರು, ಕೂಲಿ ನಾಲಿ ಮಾಡುವ ಜನರು ನೆರೆ ರಾಜ್ಯಗಳಿಗೆ ಪ್ರತಿ ನಿತ್ಯ ಸಂಚರಿಸುತ್ತಿದ್ದಾರೆ . ಅಲ್ಲದೇ ಜೀವನೋಪಾಯಕ್ಕಾಗಿ ಹೆಚ್ಚು ಜನರು ಗೋವಾಕ್ಕೆ ಹೋಗಿ ಬರುತ್ತಿರುವ ಹಿನ್ನೆಲೆಯಲ್ಲಿ ಇವರಿಗೆ ಕೊರೊನಾ ಸೊಂಕು ತಗುಲಿ ಗಡಿ ಜಿಲ್ಲೆಗಳಲ್ಲಿ ಕೊರೊನಾ ಉಲ್ಬಣ ವಾಗುವ ಸಾಧ್ಯತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಾಗಿದೆ. ಚೆಕ್ ಪೋಸ್ಟ್ ಗಳಲ್ಲಿ ಕಟ್ಟು ನಿಟ್ಟು ತಪಾಸಣೆಗೊಳಪಡಿಸಿ ಮುಂಜಾಗ್ರತಾ ಕ್ರಮಕೈಗೊಳ್ಳಲು ಸಂಬAಧಿಸಿದ ಎಲ್ಲಾ ಅಧಿಕಾರಿಗಳಿಗೆ ಆದೇಶಿಸುವಂತೆ ಶ್ರೀ ಗೋವಿಂದ ಎಂ ಕಾರಜೋಳ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here