ಕಲಬುರಗಿ, ಫೆ 21:ನೆರೆಯ ರಾಜ್ಯಗಳಾದ ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳವಾ ಗುತ್ತಿರುವ ಹಿನ್ನೆಲೆಯಲ್ಲಿ, ಮಹಾರಾಷ್ಟçದ ಗಡಿಗೆ ಹೊಂದಿಕೊAಡಿರುವ ಕಲಬುರಗಿ ಜಿಲ್ಲೆಯಲ್ಲಿ ಸೋಂಕು ಹರದಡದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತದೊಂದಿಗೆ ಮಾತುಕತೆ ನಡೆಸುವುದಾಗಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಇಂದಿಲ್ಲಿ ಸುದ್ದಿಗಾರರೊಂದಿಗೆ ಮಾ ತನಾಡಿದ ಸಚಿವರು, ಗಡಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಯಾವುದೇ ಕಡೆ ಲಾಕ್‌ಡೌನ್ ಮಾಡುವ ಪ್ರಸ್ತಾಪ ಸರಕಾರ ದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಕಲಬುರಗಿಯಲ್ಲಿ ಆಳಂದ, ಅಫಜಲಪೂರ ಮಹಾರಾಷ್ಟç ಗಡಿಗೆ ಹೊಂದಿಕೊAಡಿದ್ದು, ಇಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಲಾಗುವುದು ಎಂದರು.
ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಕರೊನಾಗೆ ರಾಮಬಾಣವೆಂಬAತೆ ಲಸಿಕೆ ಉಚಿತವಾಗಿ ನೀಡುತ್ತಿದ್ದಾರೆ. ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು.
ಸಾರ್ವಜನಿಕರು ಕೊರೊನಾ ಬಗ್ಗೆ ಎಚ್ಚರದಂದಿದ್ದು ಕೋವಿಡ ಸುರಕ್ಷತಾ ಕ್ರಮ ಪಾಲಿಸಬೇಕೆಂದು ಹೇಳಿದರು.