ಬೆಂಗಳೂರು, ಮಾ. 17: ರಾಜ್ಯದಲ್ಲಿ ಕೊರನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ ಕಡ್ಡಾಯಗೊಳಿಸಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿರುವ ಸರಕಾರ ಇಲ್ಲಿ ಯಾವುದೇ ಲಾಕ್‌ಡೌನ್ ಆಗಲೀ ಸೀಲ್‌ಡೌನ್ ಆಗಲಿ ಅಥವಾ ರಾತ್ರಿ ಕರ್ಫ್ಯೂ ಹೇರಲಾಗುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ವೆ ಸ್ಪಷ್ಟಪಡಿಸಿದ್ದಾರೆ.
ಅವರು ಬುಧವಾರ ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿಡೀಯೋ ಕಾನ್ಪರೇನ್ಸ್ ಮೂಲಕ ನಡೆದ ಚರ್ಚೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತ, ಈಗಾಗಲೇ ರಾಜ್ಯದ ಹಲವೆಡೆ ಕೊರೊನಾ ಎರಡನೇ ಅಲೇ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದ ಮುಖ್ಯಮಂತ್ರಿಗಳು, ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ ಧರಿಸಬೇಕು, ಅಲ್ಲದೇ ಜನನೀಬಿಡ ಪ್ರದೇಶದಲ್ಲಿ ಅಷ್ಟ ಅಲ್ಲ ಎಲ್ಲಡೆ ಸಾಮಾಜಿಕ ಅಂತರ ಕಾಪಾಡುವ ಮೂಲಕ ಹೆಚ್ಚುತ್ತಿರುವ ಕೊರೊನಾಗೆ ಬ್ರೆಕ್ ಹಾಕಲು ಸಹಕರಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.