ಕಲಬುರಗಿ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

0
2304

ಕಲಬುರಗಿ. ಏ.05: ಕೋವಿಡ್-19 ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂ ಜಾಗ್ರತಾ ಕ್ರಮವಾಗಿ ಮುಂಬರುವ ಯುಗಾದಿ ಹಾಗೂ ಮತ್ತಿತರ ಹಬ್ಬಗಳ ಸಂದರ್ಭಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿಯ ಆಚರಣೆಗಳು, ಸಾರ್ವಜನಿಕರು ಗುಂಪು ಸೇರಬಹುದಾದ ಇತರೆ ಚಟುವಟಿಕೆಗಳು ಹಾಗೂ ಸಮಾರಂಭಗಳನ್ನು ನಡೆಸದಂತೆ ಮುಂದಿನ ಆದೇಶದವರೆಗೆ ಕಲಬುರಗಿ ಜಿಲ್ಲೆಯಾದ್ಯಂತ ಸಿ.ಆರ್.ಪಿ.ಸಿ. ಕಾಯ್ದೆ-1973ರ ಕಲಂ 144ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಕಲಬುರಗಿ ಜಿಲ್ಲಾಧಿಕಾರಿ ವಿ.ವಿ. ಜೋತ್ಸ್ನಾ ಅವರು ಆದೇಶ ಹೊರಡಿಸಿದ್ದಾರೆ.
ಈ ಸಂದರ್ಭದಲ್ಲಿ ಸಾಮೂಹಿಕವಾಗಿ ಧಾರ್ಮಿಕ ಮತ್ತು ವೈಯಕ್ತಿಕ ಕಾರ್ಯ ಕ್ರಮಗಳನ್ನು ಆಯೋಜಿಸುವಂತಿಲ್ಲ. ಸಾರ್ವಜನಿಕರು ಗುಂಪು-ಗುAಪಾಗಿ ಚಲಿಸುವುದು, ಅನಾವಶ್ಯಕವಾಗಿ ಹಾಗೂ ಕಾರಣ ರಹಿತವಾಗಿ ಸಂಚರಿಸುವAತಿಲ್ಲ. ಈ ಆದೇಶವು ಸಾರ್ವಜನಿಕರ ಅಗತ್ಯ ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

LEAVE A REPLY

Please enter your comment!
Please enter your name here