ಸಾರಿಗೆ ನೌಕರರ ಮುಷ್ಕರಕ್ಕೆ ನಿರ್ಭಂಧ ಮುಷ್ಕರ ನಿರತ ನೌಕರರ ಸಂಬಳ ಕಡಿತ

0
919

ಕಲಬುರಗಿ,ಏ.6:ಕರ್ನಾಟಕ ರಸ್ತೆ ಸಾರಿಗೆ ನೌಕರರ ಕೂಟವು ಇದೇ ಏಪ್ರಿಲ್ 7 ರಿಂದ ಅನಿರ್ಧಿಷ್ಠಾವಧಿಗೆ ಮುಷ್ಕರಕ್ಕೆ ಕರೆ ನೀಡಿದ್ದು, ಇದು ಕರ್ನಾಟಕ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ-2013 ರನ್ವಯ ಮುಷ್ಕರ ನಿರ್ಭಂದಿಸಲಾಗಿದ್ದು, ಸಂಸ್ಥೆಯ ಸಿಬ್ಬಂದಿಗಳು ತಮ್ಮ ಕರ್ತವ್ಯಕ್ಕೆ ಹಾಜರಾಗಬೇಕೆಂದು ಎಂದು ಕಲಬುರಗಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೂರ್ಮರಾವ್ ಎಂ. ಅವರು ತಿಳಿಸಿದ್ದಾರೆ.
ಕರ್ತವ್ಯಕ್ಕೆ ಹಾಜರಾದ ಸಂಸ್ಥೆಯ ನೌಕರರಿಗೆ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಸಂಸ್ಥೆಯ ನೌಕರರಿಗೆ ಕರ್ತವ್ಯಕ್ಕೆ ಬರದಂತೆ ಯಾರಾದರೂ ಅಡೆತಡೆ ಉಂಟು ಮಾಡಿದ್ದಲ್ಲಿ ಅಥವಾ ಎಸ್.ಎಂ.ಎಸ್., ವಾಟ್ಸ್ ಆಪ್ ಮತ್ತಿತರ ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚೋದನೆ ನೀಡಿದ್ದಲ್ಲಿ ಹಾಗೂ ಸಂಸ್ಥೆಯ ಆಸ್ತಿಗೆ ಹಾನಿ ಉಂಟು ಮಾಡಿದ್ದಲ್ಲಿ ಅಂತಹವರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುತ್ತದೆ ಅವರು ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ-2013 ರಡಿ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ. ಇತರೆ ಯಾವುದೇ ಸಂಘ, ಸಂಸ್ಥೆ ಅಥವಾ ವ್ಯಕ್ತಿಗಳು ಸಂಸ್ಥೆಯ ನೌಕರರು ಮುಷ್ಕರ ಹೂಡುವಂತೆ ಪ್ರಚೋದಿಸುವಂತಿಲ್ಲ ಹಾಗೂ ಬೆಂಬಲ ಸಹ ವ್ಯಕ್ತಪಡಿಸುವಂತಿಲ್ಲ ಅವರು ಸ್ಪಷ್ಟಪಡಿಸಿದ್ದಾರೆ.
2021ರ ಏಪ್ರಿಲ್ 7 ರಿಂದ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅನುಸೂಚಿಗಳ ಕಾರ್ಯಾಚರಣೆಯು ಸಾಮಾನ್ಯ ಸ್ಥಿತಿಗೆ ಬರುವವರೆಗೆ ಕೆಲಸಕ್ಕೆ ಗೈರು ಹಾಜರಾಗುವ ನೌಕರರ ವಿರುದ್ಧ ಕೆಲಸ ಮಾಡದಿದ್ದಾಗ ವೇತನವಿಲ್ಲ ಎಂಬ ತತ್ವದ ಪ್ರಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here