ಯುಪಿ ಮಾದರಿಯಲ್ಲಿ ಕರ್ನಾಟಕದಲ್ಲೂ ಲಾಕ್‌ಡೌನ್?

0
1242

ಬೆಂಗಳೂರು, ಏ. 16: ದೇಶದಲ್ಲಿ ಅದರಲ್ಲೂ ಕರ್ನಾಟಕದಲ್ಲಿ ದಿನೇ ದಿನೇ ಕೊರೊನಾ ಸೋಂಕಿನ ಹೊಸ ಪ್ರಕರಣಗಳ ಸಂಖ್ಯ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯದ 7 ಜಿಲ್ಲೆಗಳಲ್ಲಿ 10 ದಿನಗಳ ಕಾಲ ರಾತ್ರಿ ಕರ್ಫ್ಯೂ ಜಾರಿ ಮಾಡಿದ್ದು, ಇದರಿಂದ ಏನು ಪ್ರಯೋಜನವಾಗದ ಹಿನ್ನೆಲೆಯಲ್ಲಿ ಇನ್ನು ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಸರಕಾರ ಬರುವ ಮಂಗಳವಾರ ನಿರ್ಧಾರ ಕೈಗೊಳ್ಳಲಿದೆ.
ವೈದ್ಯಕೀಯ ಸಚಿವ ಡಾ. ಸುಧಾಕರ ಅವರು ಈಗಾಗಲೇ ರಾಜ್ಯದಲ್ಲಿಯ ಕರೊನಾ ವೈರಸ್ ಪರಿಸ್ಥಿತಿ ಕುರಿತು ತಜ್ಞರ ವರದಿ ತರಿಸಿಕೊಂಡಿದ್ದು, ಪರೋಕ್ಷವಾಗಿ ರಾಜ್ಯದಲ್ಲಿ ಇನ್ನು ನಾಲ್ಕು ದಿನಗಳಲ್ಲಿ ಲಾಕ್‌ಡೌನ್ ಹೇರುವ ಬಗ್ಗೆ ಪರೋಕ್ಷವಾಗಿ ಸೂಚನೆ ನೀಡಿದ್ದಾರೆ.
ಈಗಾಗಲೇ ಉತ್ತರ ಪ್ರದೇಶ ಸರಕಾರ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳಿಗೆ ಮಟ್ಟ ಹಾಕಲು ಸಂಪೂರ್ಣ ರಾಜ್ಯದಲ್ಲಿ ಸಂಡೇ ಲಾಕ್‌ಡೌನ್ ಘೋಷಣೆ ಮಾಡಿದ್ದು ಅಲ್ಲದೇ ಮುಖಕ್ಕೆ ಮಾಸ್ಕ್ ಧರಿಸದೇ ಇದ್ದರೆ 10 ಸಾವಿರ ರೂ.ವರೆಗೆ ದಂಡ ವಿಧಿಸಿ ಆದೇಶ ಜಾರಿಮಾಡದೆ.
ಇದನ್ನು ರಾಜ್ಯದಲ್ಲೂ ಅನುಕರಣೆ ಮಾಡುವ ಸಾಧ್ಯತೆಯಿದ್ದು, ಈಗಿರುವ ನೈಟ್ ಕರ್ಫ್ಯೂವನ್ನು ಇನ್ನಷ್ಟು ದಿನ ವಿಸ್ತರಿಸುವ ಸಾಧ್ಯತೆ ಜೊತೆಗೆ ರಾಜ್ಯದಲ್ಲಿಯೂ ಪ್ರತಿ ಸಂಡೇ ಕರ್ಫ್ಯೂ ಜಾರಿ ಮಾಡುವ ಸಾಧ್ಯತೆಯಿದೆ ಎಂದು ನಂಬಲರ್ಹ ಮೂಲಗಳಿಂದ ತಿಳಿದುಬಂದಿದೆ.

LEAVE A REPLY

Please enter your comment!
Please enter your name here