ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೇ 24 ಜನರ ಸಾವು

0
958

ಚಾಮರಾಜನಗರ, ಮೇ. 3: ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ಆಕ್ಸಿಜನ್ ಇಲ್ಲದೇ 24 ಜನ ಕೋವಿಡ್ ಸೋಂಕಿತರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಸರಕಾರಿ ಆಸ್ಪತ್ರೆಗೆ ಮೈಸೂರಿನಿಂದ ಆಕ್ಸಿಜನ್ ಸಿಲೆಂಡರ್ ಬರುತ್ತಿದ್ದವು, ಇಂದು ಈ ಸಿಲೆಂಡರ್ ಬರದೇ ಇರುವುದರಿಂದ ಸೋಂಕಿತರು ಆಕ್ಸಿಜನ್ ಇಲ್ಲದೇ ಪರದಾಡಿ ಸಾವನ್ನಪ್ಪಿದ್ದು, ಸೋಂಕಿತರ ಸಂಬAಧಿಗಳ ಆಕ್ರಂದನ ಮುಗಿಲು ಮುಟ್ಟಿದೆ.
ಆಸ್ಪತ್ರೆ ಎದುರು ಜಮಾಯಿಸಿದ ಸಂಬAಧಿಕರು ಪ್ರತಿಭಟನೆಯಲ್ಲಿ ತೊಡಗಿದ್ದು, ಅವರನ್ನು ಚದುರಿಸಲು ಪೋಲಿಸರು ಹರಸಾಹಸ ಪಡಬೇಕಾಯಿತು.
ಈ ಘಟನೆಗೆ ಸಂಬAಧಪಟ್ಟAತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧುರಿ ವಿರುದ್ಧ ಕ್ರಮ ಕೈಗೊಳ್ಳಬೇಕು ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವ ಸುರೇಶಕುಮಾರ ಹಾಗೂ ಆರೋಗ್ಯ ಸಚಿವ ಡಾ. ಸುಧಾಕರ್ ಅವರನ್ನು ಖಾತೆಯಿಂದ ಬದಲಿಸಬೇಕು ಎಂದು ಕಾಂಗ್ರೆಸ್ ಶಾಸಕ ದಿನೇಶ ಗುಂಡೂರಾವ್ ಅವರು ಆಗ್ರಹಿಸಿದ್ದಾರೆ.
ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಟ್ವಿಟ್ ಮಾಡಿದ್ದು, ಈ ಘಟನೆ ನಡೆದಿದ್ದು, ದುರದೃಷ್ಟಕರ, ಯಾರೇ ತಪ್ಪು ಮಾಡಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಳಾಗುವುದು ಅಲ್ಲದೇ ಈ ಕುರಿತಂತೆ ನಾಳೆ ಕ್ಯಾಬಿನೆಟ್ ಮಿಟಿಂಗ್ ಸಹ ಕರೆಯಲಾಗಿದೆ. ಇದರಲ್ಲಿ ಚರ್ಚಿಸಿ, ರಾಜ್ಯದಲ್ಲಿ ಉಂಟಾಗುತ್ತಿರುವ ಆಕ್ಸಿಜನ್, ಬೆಡ್ ಹೀಗೆ ಹಲವಾರು ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದಿದ್ದಾರೆ.

LEAVE A REPLY

Please enter your comment!
Please enter your name here