ಕೊರೊನಾಗೆ ಮಾಜಿ ಜಿ.ಪಂ. ಸದಸ್ಯ ಗುರುಶಾಂತ ಪಟ್ಟೇದಾರ ಬಲಿ

0
2411

ಕಲಬುರಗಿ, ಮೇ. 04: ಮಾರಕ ಕೋರೊನಾದಿಂದಾಗಿ ಇಂದು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ದಲಿತ ಮುಖಂಡ ಗುರುಶಾಂತ ಪಟ್ಟೇದಾರ ಅವರು ಬಲಿಯಾಗಿದ್ದಾರೆ.
ದಿವಂಗತರಿಗೆ ಸುಮಾರು 65 ವರ್ಷ ವಯಸ್ಸಾಗಿತ್ತು.
ನಿನ್ನೆಯಷ್ಟೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಇಂದು ಸಂಜೆ 4 ಗಂಟೆ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
ಅಫಜಲಪೂರ ತಾಲೂಕಿನ ಗೊಬ್ಬೂರ ಕ್ಷೇತ್ರದಿಂದ 1996ರಲ್ಲಿ ಜಿಲ್ಲಾ ಪಂಚಾಯತ್ ಸದಸಯರಾಗಿ ಆಯ್ಕೆಯಾದ ಪಟ್ಟೇದಾರ ಅವರು ತಮ್ಮ ಜೀವಿತ ಅವಧಿಯಲ್ಲಿ ಹಲವಾರು ಜನಪರ ಹೋರಾಟಗಳನ್ನು ಮಾಡುವ ಮೂಲಕ ಜಿಲ್ಲೆಯ ಜನತೆಯ ಮನದಲ್ಲಿ ಅಚ್ಚಹಸಿರಾಗಿ ಉಳಿದಿದ್ದಾರೆ.
ದಿವಂಗತರು ಒಬ್ಬ ಸಹೋದರ, ಇಬ್ಬರು ಗಂಡು ಮತ್ತು ಹೆಣ್ಣು ಮಕ್ಕಳು, ಪತ್ನಿ ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟಿ ಅಗಲಿದ್ದಾರೆ.
ಅವರ ಆತ್ಮಕ್ಕೆ ಶಾಂತಿ ಸಿಗಲೇಂದು ಮಾಜಿ ಮಹಾನಗರಪಾಲಿಕೆ ಸದಸ್ಯ ಸೂರ್ಯಕಾಂತ ನಿಂಬಾಳಕರ್ ಹಾಗೂ ಕಾಂಗ್ರೆಸ್ ಮುಖಂಡ ಶಾಮ ನಾಟೀಕರ್ ಅವರುಗಳು ಪ್ರಾರ್ಥಿಸಿದ್ದಾರೆ.

LEAVE A REPLY

Please enter your comment!
Please enter your name here