ನವದೆಹಲಿ, ಮೇ 5-ದೇಶದಲ್ಲಿ ಕೊರೊನಾ ಸೋಂಕು ಮಿತಿಮೀರಿದ್ದರೂ ದೇಶಾದ್ಯಂತ ಸಂಪೂರ್ಣ ಲಾಕ್ ಡೌನ್ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿಲ್ಲ. ಈ ನಿರ್ಧಾರವನ್ನು ಆಯಾ ರಾಜ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿ ನೀಡಿದ್ದಾರೆ.
ದೇಶದಲ್ಲಿ ಅಬ್ಬರಿಸುತ್ತಿರುವ ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ತಜ್ಞರು ಸೇರಿದಂತೆ ಸುಪ್ರೀಂಕೋರ್ಟ್ ಕೂಡ ಸೂಚಿಸಿತ್ತು. ಆದರೆ ಸಂಪೂರ್ಣ ಲಾಕ್ ಡೌನ್ ಗೆ ನರೇಂದ್ರ ಮೋದಿ ಸಹಮತ ವ್ಯಕ್ತಪಡಿಸಿಲ್ಲ.
ಲಾಕಡೌನ್ ಮಾಡಲಿ ಅಥವಾ ಮಾಡದಿರಲಿ ಆರ್ಥಿಕ ಸಂಕಷ್ಟ ನಿಶ್ಚಿತ ಎಂದು ಎಚ್ಚರಿಕೆ ನೀಡಿದ್ದಾರೆ.
ಹೀಗಾಗಿ ಇಂದಿನ ಮೋದಿ ಸಂಪುಟ ಸಭೆಯಲ್ಲಿ ಲಾಕಡೌನ್ ಬಗ್ಗೆ ನಿರ್ಣಯ ತೆಗೆದುಕೊಳ್ಳಬಹುದು ಎಂಬ ಸುದ್ದಿ ಹರಡಿತ್ತು. ಆದರೆ ಮೋದಿ ಸರ್ಕಾರ ಇಡೀ ದೇಶದಲ್ಲಿ ಸಂಪೂರ್ಣ ಲಾಕಡೌನ್‌ಗೆ ಮನಸ್ಸು ಮಾಡಿಲ್ಲ. ಕಾದು ನೊಡುವ ತಂತ್ರಕ್ಕೆ ಮೊರೆಹೋಗಿದೆ.
ಸದ್ಯದ ಪರಿಸ್ಥಿತಿಯಲ್ಲಿ ಲಾಕ್‌ಡೌನ್ ಮಾಡುವ ನಿರ್ಧಾರ ತೆಗೆದುಕೊಳ್ಳುವ ನಿರ್ಣಯವನ್ನು ಸಂಬAಧಪಟ್ಟ ರಾಜ್ಯಗಳಿಗೆ ಮೋದಿ ಸರ್ಕಾರ ನೀಡಿದೆ.
ಕೊರೊನಾ ಸಂಕಷ್ಟದ ಕಾರಣ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯಡಿ ಹೆಚ್ಚುವರಿಯಾಗಿ ಮೇ ಮತ್ತು ಜೂನ್ ತಿಂಗಳಲ್ಲಿ ಬಿಪಿಎಲ್ ಪಡಿತರದಾರರಿಗೆ ತಲಾ 5 ಕೆಜಿ ಅಕ್ಕಿ ಉಚಿತವಾಗಿ ನೀಡಲು ಸಂಪುಟ ಸಭೆ ಒಪ್ಪಿಗೆ ನೀಡಿತು. ಇದರಿಂದ 80 ಕೋಟಿ ಭಾರತೀಯರಿಗೆ ಅನುಕೂಲವಾಗಲಿದೆ.
ಸ್ಥಳೀಯವಾಗಿ ಜಾರಿ ಆಗ್ತಿರುವ ಲಾಕ್‌ಡೌನ್ ಪರಿಸ್ಥಿತಿ, ಮಳೆ ಇನ್ನಿತರೆ ಅಂಶಗಳನ್ನು ಪರಿಗಣಿಸಿ ಎರಡು ತಿಂಗಳು ಉಚಿತ ಆಹಾರ ಧಾನ್ಯ ನೀಡಲು ಕೇಂದ್ರ ತೀರ್ಮಾನಿಸಿದೆ.