ಬೆಂಗಳೂರು, ಮೇ. 6: ಸೋಂಕಿತರಿಗಾಗಿ ಸರ್ಕಾರಿ ಆರೋಗ್ಯ ಪ್ರಾಧಿಕಾರದಿಂದ ಶಿಫಾರಸ್ಸಾಗಿರುವ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಹಾಸಿಗೆ ಕಾಯ್ದಿರಿಸುವ ಹಾಗೂ ಅವರುಗಳ ಚಿಕಿತ್ಸೆಗಾಗಿ ದರ ನಿಗದಿಪಡಿಸಿ ಆರೋಗ್ಯ ಮತ್ತು ಕಲ್ಯಾಣ ಇಲಾಖೆಯು ಆದೇಶ ಜಾರಿಮಾಡಿದೆ.
ಇತ್ತೀಚೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಖಾಸಗಿ ಆಸ್ಪತ್ರೆಗಳು ಕೈಗೊಂಡ
ಸಭೆಯಲ್ಲಿ, ಮಾನವ ಸಂಪನ್ಮೂಲ ಹಾಗೂ ಪರಿಕರಗಳ ವೆಚ್ಚವು ಹೆಚ್ಚಾಗುತ್ತಿರುವುದರಿಂದ ಪ್ಯಾಕೇಜ್ ದರಗಳ ಪರಿಷ್ಕರಣೆಗಾಗಿ ಕೋರಲಾಗಿತ್ತು. ಅದರಂತೆ ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ತಾಂತ್ರಿಕ ಸಮಿತಿಯಿಂದ ಪರಿಶೀಲನೆ ಕೈಗೊಳ್ಳಲಾಗಿದೆ.
ಸಾರ್ವಜನಿಕ ಆರೋಗ್ಯ ಸಂಸ್ಥೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರದಿಂದ ಸೂಚಿತ ಮಾಡಿದ ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಖಾಸಗಿ ಆರೋಗ್ಯ ಸೇವೆಗೆ ನೀಡುತ್ತಿರುವ ಪ್ಯಾಕೇಜ್ ದರಗಳನ್ನು ಪರಿಷ್ಕರಿಸಿ ಆದೇಶಿಸಿದೆ.
ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಪಿಪಿಇ ಹಾಗೂ ಪರಿಕರಗಳನ್ನು ಒಳಗೊಂಡAತೆ ಸೂಚಿಸಿರುವ
ದರಗಳು ಇಂದು ಅಧಿಸೂಚನೆ ಹೊರಡಿಸುವ ಮೂಲಕ ಜಾರಿಗೊಳಿಸಲಾಗಿದೆ.
ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ದಿನವೊಂದಕ್ಕೆ ಈ ಕೆಳಕಂಡ ಪ್ಯಾಕೇಜ್ ದರಗಳು ಅಧಿಸೂಚನೆಯ ದಿನಾಂಕದಿAದ ಜಾರಿಗೊಳ್ಳುತ್ತವೆ.
ಜನರಲ್ ವಾರ್ಡ್ಗಳಿಗೂ ಪ್ರತಿ ಸೋಂಕಿತರಿಗೆ ರೂ. 5200/- ನಿಗದಿ ಮಾಡಿದ್ದು, ಅದರಂತೆ ಹೆಚ್‌ಡಿಯುಗಳಲ್ಲಿ ಚಿಕಿತ್ಸೆಗಾ ರೂ. 8000/- ಮತ್ತು ಐಸೋಲೇಷನ್ ಐಸಿಯು ವೆಂಟಿಲೇಟರ್‌ರಹಿತ – ರೂ. 9750/-ಕ್ಕೆ ಮತ್ತು ಐಸೋಲೇಷನ್‌ಐಸಿಯು ವೆಂಟಿಲೇಟರ್ ಸಹಿತ ಚಿಕಿತ್ಸೆಗಾಈ ರೂ. 11500/- ರೂ. ನಿಗದಿಪಡಿಸಿದೆ.
ಈ ಆದೇಶವನ್ನು ಪಾಲಿಸದಿದ್ದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ, 2005ರ ಸೆಕ್ಷನ್ (51 ರಿ0ದ 60) ಮತ್ತು ಭಾರತೀಯ ದಂಡ ಸಂಹಿತೆಯ ಸಂಬAಧಿತ ವಿಭಾಗಗಳ ಅಡಿಯಲ್ಲಿ ಶಿಕ್ಷಾರ್ಹವಾಗಿರುತ್ತದೆ. ಇದಲ್ಲದೆ ಸಂಬAಧ ಪಟ್ಟ ಭಾರತೀಯ ದಂಡನಾ ಕಾಯ್ದೆಯ ಸೂಕ್ತ ಸೆಕ್ಟನ್‌ಗಳಡಿಯಲ್ಲಿ ಶಿಕ್ಷಾರ್ಹವಾಗಿರುತ್ತದೆ ಮತ್ತು ಇತರೆ ಕಾನೂನುಗಳು ಅನ್ವಯಿಸುತ್ತವೆ ಎಂದು ರಾಜ್ಯದ ಮುಖ್ಯಕಾರ್ಯದರ್ಶಿಗಳು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.