ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ನಿಧನ

    0
    826

    ಮೈಸೂರು, ಮೇ. 21: ಕರ್ನಾಟಕ ವಿಧಾನಸಭೆ ಮಾಜಿ ಸ್ಪೀಕರ್ ಹಿರಿಯ ರಾಜಕಾರಣಿ, ಕೆ.ಆರ್.ಪೇಟೆ ಕೃಷ್ಣ ಅವರು ಶುಕ್ರವಾರ ನಿಧನರಾದರು.
    80 ವರ್ಷದ ಕೃಷ್ಣ ಅವರು ಲಿವರ್ ಕ್ಯಾನ್ಸರ್‌ಗೆ ತುತ್ತಾಗಿದ್ದ ಅವರಿಗೆ ಚೆನ್ನೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದ ಕಾರಣ ಮೈಸೂರಿನ ಕುವೆಂಪು ನಗರದ ನಿವಾಸಕ್ಕೆ ಕರೆತರಲಾಗಿತ್ತು. ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
    ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕೊತ್ತಮಾರನಹಳ್ಳಿ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ಅಂತ್ಯಸAಸ್ಕಾರ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
    ಕೆ.ಆರ್.ಪೇಟೆ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಕೃಷ್ಣ ಅವರು ಒಮ್ಮೆ ಸಚಿವರಾಗಿ, ಒಮ್ಮೆ ಸ್ಪೀಕರ್ ಆಗಿ ಕೆಲಸ ನಿರ್ವಹಿಸಿದ್ದರು. 1996ರಲ್ಲಿ ಲೋಕಸಭೆಗೆ ಆಯ್ಕೆಯಾಗಿದ್ದರು.
    ಜನತಾಪಕ್ಷದ ಎಸ್.ಆರ್.ಬೊಮ್ಮಾಯಿ ಸರ್ಕಾರದಲ್ಲಿ ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವರಾಗಿದ್ದ ಕೃಷ್ಣ, 2004ರಲ್ಲಿ ಸಮ್ಮಿಶ್ರ ಸರ್ಕಾರದಲ್ಲಿ ವಿಧಾನಸಭೆ ಸ್ಪೀಕರ್ ಆಗಿದ್ದರು. 2006ರ ಜೆಡಿಎಸ್-ಬಿಜೆಪಿ ಸರ್ಕಾರದಲ್ಲೂ ಸ್ಪೀಕರ್ ಆಗಿ ಮುಂದುವರಿದಿದ್ದರು. 2008 ಹಾಗೂ 2013ರ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡರು. 2018ರಲ್ಲಿ ಅನಾರೋಗ್ಯ ಕಾರಣಕ್ಕೆ ಸಕ್ರಿಯ ರಾಜಕಾರ ಣದಿಂದ ನಿವೃತ್ತಿ ಘೋಷಿಸಿದ್ದರು.

    LEAVE A REPLY

    Please enter your comment!
    Please enter your name here