ಯಡಿಯೂರಪ್ಪ ನಮ್ಮ ನಾಯಕರು: ಶಾಸಕ ದತ್ತಾತ್ರೇಯ ಪಾಟೀಲ್

0
878

ಕಲಬುರಗಿ, ಮೇ. 28:ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನಮ್ಮ ನಾಯಕರು, ಅವರು ಮುಖ್ಯಮಂತ್ರಿಯಾಗಿ ಅವರು ತಮ್ಮ ಐದು ವರ್ಷಳ ಅವಧಿ ಪೂರ್ಣಗೊಳಿಸುವರು ಎಂದು ಶಾಸಕ ಹಾಗೂ ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ದತ್ತಾತ್ರೇಯ ಪಾಟೀಲ್ ರೇವು ಅವರು ಸ್ಪಷ್ಟವಾಗಿ ಹೇಳಿದ್ದಾರೆ.
ರಾಜ್ಯ ರಾಜಕೀಯದಲ್ಲಿ ಇತ್ತೀಚಿನ ಬೆಳವಣಿಗೆ ಹಾಗೂ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬAಧಿಸಿದAತೆ ಪ್ರತಿಕ್ರಿಯಿಸಿದ ರೇವೂರ ಅವರು, ಮುಖ್ಯಮಂತ್ರಿ ಬದಲಾವಣೆ ಕೇವಲ ಊಹಾಪೋಹ. ಯಡಿಯೂರಪ್ಪ ಅವರೇ ನಮ್ಮ ನಾಯಕರು. ಕೋವಿಡ್ ಸಂಕಷ್ಟದ ಈ ಸಮಯದಲ್ಲಿ ಅವರು ಒಳ್ಳೆಯ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.
ಅವರಿಂದಿಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಸಹಭಾಗಿತ್ವದಲ್ಲಿ 28 ಕೋಟಿ ರೂ.ವೆಚ್ಚದಲ್ಲಿ ಎಂ.ಎಸ್.ಕೆ.ಮಿಲ್ ಕಣ್ಣಿ ಮಾರುಕಟ್ಟೆಯಲ್ಲಿ ತರಕಾರಿ ಮಾರುಕಟ್ಟೆ ಹಾಗೂ ಕೋಲ್ಡ್ ಸ್ಟೋರೇಜ್ ನಿರ್ಮಾಣ ಕಾಮಗಾರಿಗೆ ಮಂಡಳಿಯಿAದ ಮಂಜೂರಾತಿ ಪಡೆದು ಸರ್ಕಾರದ ಅನುಮೋದನೆಗಾಗಿ ಕಳುಹಿಸಿಕೊಡಲಾಗಿತ್ತು. ಮೇ.27 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕಣ್ಣಿ ಮಾರುಕಟ್ಟೆಯಲ್ಲಿ ತರಕಾರಿ ಮಾರುಕಟ್ಟೆ ಹಾಗೂ ಕೋಲ್ಡ್ ಸ್ಟೋರೇಜ್ ನಿರ್ಮಾಣ ಕಾಮಗಾರಿಗೆ ಅನುಮೋದನೆ ದೊರೆತಿದೆ. ಅಲ್ಲದೆ ಹಾಗರಗಾ ವಸತಿ ಯೋಜನೆಯು ಕೂಡ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಗೊಂಡಿದೆ ಇದಕ್ಕಾಗಿ ಮುಖ್ಯಮಂತ್ರಿಗಳನ್ನು ಅಭಿನಂದಿಸುತ್ತೇನೆ ಎಂದರು.

LEAVE A REPLY

Please enter your comment!
Please enter your name here