ಜೂನ್ 14ರ ತನಕ ರಾಜ್ಯಾದ್ಯಂತ ಲಾಕ್‌ಡೌನ್

0
912

ಬೆಂಗಳೂರು, ಜೂನ್ 3: ಕೋವಿಡ್19 ಎರಡನೇ ಅಲೆ ನಿಯಂತ್ರಣಕ್ಕಾಗಿ ಕರ್ನಾಟಕದಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್ ವಿಸ್ತರಣೆ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಈ ಕುರಿತಂತೆ ಅಧಿಕೃತ ಪ್ರಕಟಣೆ, ಮಾರ್ಗಸೂಚಿ ಶೀಘ್ರವೇ ಹೊರ ಬರಲಿದೆ.
ಕರ್ನಾಟಕದಲ್ಲಿ ಕೊರೊನಾ ಸಾಂಕ್ರಾಮಿಕ ನಿಯಂತ್ರಣಕ್ಕಾಗಿ ಮೇ 10 ರಿಂದ 14ರ ತನಕ ಲಾಕ್‌ಡೌನ್ ಮಾಡಲಾಗಿತ್ತು. ಪುನಃ ಮೇ 24ರಿಂದ ಜೂನ್ 7ರ ತನಕ ಲಾಕ್‌ಡೌನ್ ಮುಂದುವರೆದಿದೆ. ಈಗ ಜೂನ್ 14ರ ತನಕ ಲಾಕ್‌ಡೌನ್ ಅವಧಿ ವಿಸ್ತರಿಸಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.
ರಾಜ್ಯದ ಅರ್ಥಿಕ ಪರಿಸ್ಥಿತಿ, ಉದ್ಯಮಗಳ ಪರಿಸ್ಥಿತಿಯನ್ನು ನೋಡಿಕೊಂಡು ಕೆಲವು ವಿನಾಯಿತಿಗಳನ್ನು ನೀಡಲಾಗುತ್ತದೆ. ಹಂತ ಹಂತವಾಗಿ ಅನ್‌ಲಾಕ್ ಪ್ರಕ್ರಿಯೆಗೆ ಚಾಲನೆ ಸಿಗಲಿದೆ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಈಗಾಗಲೇ ಸುಳಿವು ನೀಡಿದ್ದಾರೆ.

LEAVE A REPLY

Please enter your comment!
Please enter your name here