ಜುಲೈ 1ರಂದು ಪತ್ರಕರ್ತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ

0
975

ಕಲಬುರಗಿ, ಜೂನ್. 30: ನಾಳೆ ಗುರುವಾರ ಜುಲೈ ಒಂದರAದು ಪತ್ರಿಕಾ ದಿನಾಚರಣೆಯ ಅಂಗವಾಗಿ ಪತ್ರಕರ್ತರರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಹೈದ್ರಾಬಾದ ಕನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಆಸ್ಪತ್ರೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಲಬುರ್ಗಿ ಘಟಕದ ಸಂಯುಕ್ತಾಶ್ರಯದಲ್ಲಿ ಬೆಳಿಗ್ಗೆ 11.00 ಗಂಟೆಗೆ ಈ ಶಿಬಿರ ಆಯೋಜಿಲಾಗಿದೆ.
ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು, ಎಲ್ಲಾ ಪತ್ರಕರ್ತರು ಮತ್ತು ಮಾಧ್ಯಮ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳು ಈ ಆರೋಗ್ಯ ತಪಾಸಣಾ ಶಿಬಿರದ ಪ್ರಯೋಜನ ಪಡೆಯಲು ಕೋರಲಾಗಿದೆ.
ಆದ್ದರಿಂದ ಎಲ್ಲಾ ಸಂಘದ ಸದಸ್ಯರು ಮಾಧ್ಯಮ ಮಿತ್ರರು ಹಾಗೂ ಮಾಧ್ಯಮ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಗಳು, ಈ ಉಚಿತ ಆರೋಗ್ಯ ತಪಾಸಣಾ ಶಿಬಿರದ ಲಾಭ ಪಡೆಯಬೇಕೆಂದು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಭವಾನಿಸಿಂಗ್ ಠಾಕೂರ ಅವರು ಎಲ್ಲ ಮಾಧ್ಯಮದವರಲ್ಲಿ ಕೋರಿದ್ದಾರೆ.

LEAVE A REPLY

Please enter your comment!
Please enter your name here