SSLC ಪರೀಕ್ಷೆ: ಕೇಂದ್ರದ 200 ಮೀ.ಸುತ್ತ ನಿಷೇಧಾಜ್ಞೆ ಜಾರಿ:ಡಿ.ಸಿ ಆದೇಶ

0
728

ಕಲಬುರಗಿ.ಜು.18:ಕಲಬುರಗಿ ಜಿಲ್ಲೆಯಾದ್ಯಂತ 2021-22ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಮುಖ್ಯ ಪರೀಕ್ಷೆಗಳು ಇದೇ ಜುಲೈ 19 ಮತ್ತು 22 ರಂದು 209 ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷೆ ಸುಸೂತ್ರವಾಗಿ ನಡೆಯಲು ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ಸಿ.ಆರ್.ಪಿ‌.ಸಿ ಕಾಯ್ದೆ-1973 ಕಲಂ 144ರನ್ವಯ
ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷೆ ನಡೆಯುವ ಸಂರ‍್ಭದಲ್ಲಿ ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ನಿಷೇಧಿತ ಪ್ರದೇಶದಲ್ಲಿನ ಎಲ್ಲಾ ಜೆರಾಕ್ಸ್ ಅಂಗಡಿ, ಪುಸ್ತಕ ಮಳಿಗೆಗಳನ್ನು ಮುಚ್ಚುವಂತೆ ಆದೇಶದಲ್ಲಿ ತಿಳಿಸಿದೆ.

ಇದಲ್ಲದೆ ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಮತ್ತು ಸಿಬ್ಬಂದಿ ರ‍್ಗ ಹೊರತುಪಡಿಸಿ ಇನ್ನಿತರ ಯಾವುದೇ ವ್ಯಕ್ತಿಗಳು 200 ಮೀಟರ್ ಪ್ರದೇಶದಲ್ಲಿ ಮೊಬೈಲ್ ಫೋನ್, ಪೇಜರ್, ಬ್ಲೂಟೂತ್, ವೈರ್ ಲೆಸ್ ಸೆಟ್ ಗಳು ಹಾಗೂ ಇತ್ಯಾದಿ ಎಲೆಕ್ಟ್ರಾನಿಕ್ ವಸ್ತುಗಳನ್ನು ಉಪಯೋಗಿಸುವುದನ್ನು ರ‍್ನಾಟಕ ಪೋಲಿಸ್ ಅಧಿನಿಯಮ-1963 ಕಲಂ 35(ಸಿ) ರನ್ವಯ ನಿಷೇಧಿಸಿ ಡಿ.ಸಿ. ಅವರು ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here