ರಾಜ್ಯದ 23ನೇ ಸಿಎಂ ಆಗಿ ಬೊಮ್ಮಾಯಿ ನಾಳೆ ಪ್ರಮಾಣ ವಚನ

0
599

ಬೆಂಗಳೂರು, ಜುಲೈ. 27: ರಾಜ್ಯದ 23ನೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಬುಧುವಾರ ಬೆಳಿಗ್ಗೆ 11 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ಸರಳ ಸಮಾರಂಭದಲ್ಲಿ ಪ್ರಮಾಣ ವಚನವನ್ನು ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು ಬೋಧಿಸಲಿದ್ದಾರೆ.
ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಆಯ್ಕೆಯಾದ ನಂತರ ನೇರವಾಗಿ ರಾಜಭವನಕ್ಕೆ ತೆರಳಿದ ಬೊಮ್ಮಾಯಿ ಅವರು ನೂತನವಾಗಿ ತಮ್ಮ ನೇತೃತ್ವದಲ್ಲಿ ಸರಕಾರ ರಚನೆ ಅವಕಾಶ ಕೋರಿ ರಾಜ್ಯಪಾಲರಿಗೆ ಪ್ರಸ್ತಾವನೆ ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here