ವೇತನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರ ಧರಣಿ ಸತ್ಯಾಗ್ರಹ

0
757

ಕಲಬುರಗಿ, ಆ.2- ಹೊರಗುತ್ತಿಗೆ ನೌಕರರ ಬಾಕಿ ವೇತನ ಬಿಡುಗಡೆ, ಮಹಾಮಾರಿ ಕೋವಿಡ-19 ಲಾಕ್‌ಡೌನ್ ಅವಧಿಯ ರಜೆ ವೇತನ ನೀಡಬೇಕು ಎಲ್ಲ ಹೊರಗುತ್ತಿಗೆ ನೌಕರರಿಗೆ ಕೆಲಸಕ್ಕೆ ಹಾಜರಾಗುವಂತೆ ಆದೇಶಿಸಬೇಕು ಸೇರಿದಂತೆ ವಿವಿಧ ಪ್ರಮುಖ ಬೇಡಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ನೇತೃತ್ವzಲ್ಲಿ ಸೋಮವಾರ ಜಿಲ್ಲಾ ಪಂಚಾಯತ್ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಐದು ವರ್ಷ ಸೇವೆ ಸಲ್ಲಿಸಿದ ಹೊರಗುತ್ತಿಗೆ ನೌಕರರಿಗೆ ಕ್ಷೇಮಾಭಿವೃದ್ದಿ ಯೋಜನೆಯಡಿ ನೇಮಕಾತಿ ಮಾಡಿಕೊಳ್ಳಬೇಕು ಎಂಬ ಬೇಡಿಕೆಯ ಮನವಿ ಪತ್ರವನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸ ಲಾಯಿತು.
ಧರಣಿ ಸತ್ಯಾಗ್ರಹದಲ್ಲಿ ಭೀಮಶೆಟ್ಟಿ ಯಂಪಳ್ಳಿ, ಮೇಘರಾಜ ಕಟಾರೆ, ಸುರೇಶ ದೊಡ್ಮನಿ, ಅಶ್ವಿನಿ ಚವ್ಹಾಣ, ಪರಶುರಾಮ ಹಡಲಗಿ, ರಾಮಚಂದ್ರ ಪವಾರ, ಭಾಗಣ್ಣ ದೇವನೂರ, ಶಶಿಕಲಾ ಮದ್ರಿಕಿ, ಮಾನಪ್ಪ ಜಾನಕರ್, ಸರೋಜನಿ ನಿಡಗುಂದಾ ಸೇರಿದಂತೆ ಹೊರಗುತ್ತಿಗೆ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here