ಸಿವಿಲ್ ನ್ಯಾಯಾಧೀಶರ ನೇಮಕಾತಿಗಾಗಿ ಆಗಸ್ಟ್ 8 ರಂದು ಪೂರ್ವಭಾವಿ ಪರೀಕ್ಷೆ

0
648

ಕಲಬುರಗಿ.ಆ.03:ಸಿವಿಲ್ ನ್ಯಾಯಾಧೀಶರ ನೇಮಕಾತಿ ಪೂರ್ವಭಾವಿ ಪರೀಕ್ಷೆಯು ಇದೇ ಆಗಸ್ಟ್ 8 ರಂದು ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯವರೆಗೆ ಕಲಬುರಗಿ ನಗರದ ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜಿನಲ್ಲಿ ನಡೆಯಲಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸಾö್ನ ಅವರು ತಿಳಿಸಿದ್ದಾರೆ.
ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ಕನಿಷ್ಠ ಪಕ್ಷ ಒಂದು ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು. ಪರೀಕ್ಷಾ ಕೋಣೆಗೆ ಪ್ರವೇಶಿಸುವ ಸಮಯದಲ್ಲಿ ಕೋವಿಡ್-19 ಲಸಿಕೆ ಪ್ರಮಾಣಪತ್ರ (ಸಾಫ್ಟ್ ಅಥವಾ ಹಾರ್ಡ್ ಕಾಪಿ) ಹಾಜರಪಡಿಸಬೇಕು.
ಕೋವಿಡ್ ಲಕ್ಷಣವಿರುವ ಹಾಗೂ ಕೋವಿಡ್ ಪಾಸಿಟಿವ್ ಅಭ್ಯರ್ಥಿಗಳಿಗೆ ಕಲಬುರಗಿ ನಗರದ ಏಶಿಯನ್ ಮಾಲ್ ಹತ್ತಿರವಿರುವ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯವನ್ನು ಪರೀಕ್ಷಾ ಕೇಂದ್ರವನ್ನಾಗಿ ಗುರುತಿಸಲಾಗಿದೆ.
ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಪರೀಕ್ಷೆ ಮೊದಲು ಹಾಗೂ ಪರೀಕ್ಷೆ ನಂತರ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕಡ್ಡಾಯವಾಗಿ ಡಬಲ್ ಲೇಯೆರ್ ಮಾಸ್ಕ್ ಧರಿಸಬೇಕು. ಕಡ್ಡಾಯವಾಗಿ ಸ್ಯಾನಿಟೈಜರ್ ಹಾಗೂ ಕುಡಿಯುವ ನೀರಿನ ಬಾಟಲ್ ಸಹ ತೆಗೆದುಕೊಡು ಬರಬೇಕು. ಪರೀಕ್ಷಾ ದಿನದಂದು ಅಭ್ಯರ್ಥಿಗಳು ಪರೀಕ್ಷೆ ದಿನದಂದು ಪರೀಕ್ಷಾ ಕೇಂದ್ರದ ಆವರಣದಲ್ಲಿ 2 ಗಂಟೆ ಮುಂಚಿತವಾಗಿ ಹಾಜರಿರಬೇಕು.
ಈ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಎಲ್ಲಾ ಅಭ್ಯರ್ಥಿಗಳು ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here