ಸಂಪುಟ ಸ್ಥಾನಮಾನ ಆದೇಶ ಹಿಂಪಡೆಯಲು ಯಡಿಯೂರಪ್ಪ ಆಗ್ರಹ

0
936

ಬೆಂಗಳೂರು, ಆ 8:ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಗೆ ನೀಡಿದ್ದ ಸಂಪುಟ ದರ್ಜೆ ಸ್ಥಾನಮಾನವನ್ನು ಹಿಂದಕ್ಕೆ ಪಡೆಯಬೇಕೆಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರವನ್ನು ಆಗ್ರಹ ಪಡಿಸಿದ್ದಾರೆ.
ಮಾಜಿ ಮುಖ್ಯಮಂತ್ರಿಗಳಿಗೆ ಸರ್ಕಾರ ನೀಡುವ ಸೌಲಭ್ಯವೇ ಮುಂದುವರೆಯಲಿ, ಆದರೆ ಸಂಪುಟ ದರ್ಜೆಯ ಸ್ಥಾನಮಾನವನ್ನು ಮತ್ತೆ ಹಿಂದಕ್ಕೆ ಪಡೆಯಬೇಕು ಎಂದು ಹೇಳುವ ಮೂಲಕ ಗುರುಕಾಣಿಕೆಯನ್ನು ಬಹಳ ನಯವಾಗಿಯೇ ತಿರಸ್ಕರಿಸಿದ್ದಾರೆ .
ತಮಗೆ ತಮ್ಮ ಮುಖ್ಯಮಂತ್ರಿಯಾಗಲು ಅವಕಾಶ ಮಾಡಿಕೊಟ್ಟಿದ್ದಕ್ಕಾಗಿ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಂದು ರೀತಿ ಗುರುಕಾಣಿಕೆಯಾಗಿ ಅವರಿಗೆ ತಮ್ಮ ಅಧಿಕಾರವಧಿ ಇರುವವರೆಗೂ ಸಂಪುಟ ದರ್ಜೆ ಸ್ಥಾನಮಾನ ನೀಡುವಂತೆ ಆದೇಶ ಮಾಡಿದ್ದರು.
ಏಕೋ ಏನೋ 24 ಗಂಟೆಯೊಳಗೆ ಸರಕಾರಿ ಆದೇಶವನ್ನು ಯಡಿಯೂರಪ್ಪ ನಯವಾಗಿಯೇ ತಿರಸ್ಕರಿಸಿದ್ದಾರೆ. ಮಾಜಿ ಮುಖ್ಯಮಂತ್ರಿಗಳಿಗೆ ಸಲ್ಲುವ ಸೌಲಭ್ಯ ನನಗೂ ಸಿಗಲಿ ಆದರೆ ಸಂಪುಟ ದರ್ಜೆಯ ಸ್ಥಾನಮಾನ ಬೇಕಿಲ್ಲ, ಈ ಆದೇಶವನ್ನು ಕೂಡಲೆ ಹಿಂದಕ್ಕೆ ಪಡೆಯುವಂತೆ ಮನವಿ ಮಾಡಿದ್ದಾರೆ.
ಈ ಕುರಿತು ಸಿಎಂ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ದಿನಾಂಕ 07-08-2021ರಲ್ಲಿ ಹೊರಡಿಸಿರುವ ಸರ್ಕಾರದ ಆದೇಶದಲ್ಲಿ ಬಿಎಸ್ ಯಡಿಯೂರಪ್ಪ, ನಿಕಟಪೂರ್ವ ಮುಖ್ಯಮಂತ್ರಿಗಳು ಇವರಿಗೆ ನೂತನವಾಗಿ ಪದಾರೋಹಣ ಮಾಡಿದ ಮುಖ್ಯಮಂತ್ರಿಗಳು ಪದವಿಯ ಅವಧಿ ಇರುವವರೆಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ ಆದೇಶಿಸಿದ್ದು, ಈ ಹಿಂದೆ ನಿಕಟ ಪೂರ್ವ ಮುಖ್ಯಮಂತ್ರಿಗಳಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳನ್ನು ಮಾತ್ರ ನನಗೆ ನೀಡಬೇಕಾಗಿ ಹಾಗೂ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕೆAದು ಕೋರಿದ್ದಾರೆ.

LEAVE A REPLY

Please enter your comment!
Please enter your name here