ಸರಳವಾಗಿ ಸ್ವಾತಂತ್ರೋತ್ಸವ ಆಚರಣೆ : ವಿ.ವಿ. ಜ್ಯೋತ್ಸ್ನಾ

0
659

ಕಲಬುರಗಿ.ಆ.10:ಕೋವಿಡ್ ಹಿನ್ನೆಲೆಯಲ್ಲಿ ಆಗಸ್ಟ್ 15 ರಂದು 75ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಜಿಲ್ಲಾಡಳಿತ ವತಿಯಿಂದ ಸರಳ ಮತ್ತು ಅರ್ಥಪೂರ್ಣವಾಗಿ ಆಚರಿಸುವಂತೆ ಎಂದು ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ನಡೆದ 75ನೇ ಸ್ವಾತಂತ್ರ‍್ಯ ದಿನಾಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಂಭಾವ್ಯ ಕೋವಿಡ್ 3ನೇ ಅಲೆ ಹಿನ್ನೆಲೆಯಲ್ಲಿ ಈ ಬಾರಿಯ ಸ್ವಾತಂತ್ರ‍್ಯೋತ್ಸವವನ್ನು ಸರಳವಾಗಿ ಆಚರಣೆಗೆ ಕ್ರಮ ಕೈಗೊಳ್ಳಬೇಕು. ಕೋವಿಡ್ ಮುಂಗಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಕಾರ್ಯಕ್ರಮ ನಡೆಯುವ ನÀಗರದ ಪೊಲೀಸ್ (ಡಿ.ಎ.ಆರ್) ಮೈದಾನ ಹಾಗೂ ಪಂಡಿತ್ ರಂಗಮAದಿರದಲ್ಲಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ ಇರುವುದಿಲ್ಲ. ಯಾವುದೇ ರೀತಿಯ ಸ್ತಬ್ಧ ಚಿತ್ರಗಳ ಮೆರವಣಿಗೆಯೂ ಇರುವುದಿಲ್ಲ ಎಂದು ಅವರು ಹೇಳಿದರು.
ಕೇಂದ್ರ ಸರ್ಕಾರವು ಸ್ವಾತಂತ್ರ‍್ಯೋತ್ಸವ ಸಂಬAಧಿಸಿದAತೆ ತಿಳಿಸಿರುವ ಮಾರ್ಗಸೂಚಿಗಳಿಗೆ ಅನುಗುಣವಾಗಿ ಆಚರಣೆ ಮಾಡಬೇಕು ಎಂದು ಅವರು ಸೂಚಿಸಿದರು.
ಪ್ರತಿವರ್ಷದಂತೆ ಈ ವರ್ಷವೂ ಧ್ವಜಾರೋಹಣ ನಗರದ ಪೊಲೀಸ್ (ಡಿ.ಎ.ಆರ್) ಮೈದಾನದಲ್ಲಿ ಆಯೋಜಿಸಿದ್ದು, ಆಗಸ್ಟ್ 15 ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಡಳಿತ ವತಿಯಿಂದ ನಡೆಯುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಭಾಗವಹಿಸಬೇಕು. ಇದಕ್ಕೂ ಮುನ್ನ ಬೆಳಿಗ್ಗೆ 7.30ಕ್ಕೆ ತಮ್ಮ-ತಮ್ಮ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಬೇಕು ಎಂದು ಅವರು ಹೇಳಿದರು.
ಜಿಲ್ಲೆಯ ಎಲ್ಲಾ ಇಲಾಖೆಯ ಕಚೇರಿ ಹಾಗೂ ತಾಲೂಕು ಕೇಂದ್ರಗಳ ವ್ಯಾಪ್ತಿಯಲ್ಲಿ ಸ್ವಾತಂತ್ರ‍್ಯ ದಿನಾಚರಣೆಯನ್ನು ಕೊವೀಡ್ ಮಾರ್ಗಸೂಚಿಗಳನ್ವಯ ಆಚರಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಶಿಷಾ??ಚಾರ ಪಾಲನೆ ಮತ್ತು ವೇದಿಕೆ ನಿರ್ಮಾಣ ಸೇರಿದಂತೆ ದೀಪಾಲಂಕಾರ, ನೀರಿನ, ಸ್ಯಾನಿಟೈಸರ್ ಹಾಗೂ ಇನ್ನಿತರ ವ್ಯವಸ್ಥೆಗಳನ್ನು ನೋಡಿಕೊಳ್ಳುವಂತೆ ಅವರು ಸಂಬAಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಇದಲ್ಲದೆ ರಾಷ್ಟ್ರಗೀತೆ, ನಾಡಗೀತೆ, ಪಥಸಂಚಲನ ಸೇರಿದಂತೆ ಇನ್ನಿತರ ಅಗತ್ಯ ಸಿದ್ಧ್ದತೆಗಳನ್ನು ಮಾಡಿಕೊಂಡು ಅಚ್ಚುಕಟ್ಟಾಗಿ ನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ನಿರ್ದೇಶನ ನೀಡಿದ ಅವರು, ಸ್ವಾತಂತ್ರ‍್ಯ ದಿನಾಚರಣೆಯ ಮುನ್ನಾದಿನ ಆಗಸ್ಟ್ 14 ರಂದು ಸಂಜೆ 5 ಗಂಟೆಯೊಳಗೆ ವೇದಿಕೆ ಸೇರಿದಂತೆ ಎಲ್ಲಾ ಸಿದ್ಧತೆಗಳನ್ನು ಮುಗಿಸಿರಬೇಕು ಎಂದು ಹೇಳಿದರು.
ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ, ಅಗ್ನಿಶಾಮಕದಳ, ಅರಣ್ಯ, ಎನ್.ಎನ್.ಸಿ., ಸ್ಕೌಟ್ಸ್ ಸೇರಿದಂತೆ ಒಟ್ಟು 6 ಕವಾಯತು ತಂಡಗಳು ಪಥಸಂಚಲನದಲ್ಲಿ ಭಾಗಿಯಾಗಲಿವೆ ಎಂದು ಅವರು ವಿವರಿಸಿದರು.
ಕೊರೋನಾ ವಾರಿಯರ್ಸಗೆ ಸನ್ಮಾನ: ಜಿಲ್ಲೆಯಲ್ಲಿನ ಸರ್ಕಾರಿ, ಖಾಸಗಿ ಆಸ್ಪತ್ರೆಯ ವೈದ್ಯರು, ನರ್ಸ್ಗಳು,ಅಂಬ್ಯುಲೆನ್ಸ್ ಚಾಲಕರು, ಆಶಾ ಕಾರ್ಯಕರ್ತೆಯರು ಸೇರಿದಂತೆ 25 ಮಂದಿ ಕೋವಿಡ್ ಮುಂಚೂಣಿ ಕಾರ್ಯಕರ್ತರನ್ನು ಸನ್ಮಾನಿಸಲಾಗುವುದು. ಎಲ್ಲಾ ಕೊರೋನಾ ವಾರಿಯರ್ಸ್ ಸಹ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ, ಅವರ ಪ್ರತಿನಿಧಿಗಳಾಗಿ 25 ವಾರಿಯರ್ಸ್ ಅನ್ನು ಸನ್ಮಾನಿಸಲಾಗುತ್ತದೆ ಎಂದು ಅವರು ಹೇಳಿದರು.
ಕಲಬುರಗಿ ವಿಷನ್ – 2050 ಕುರಿತು ಆಶುಭಾಷಣ, ಪ್ರಬಂಧ ಹಾಗೂ ಚಿತ್ರಕಲೆ ಸ್ಪರ್ಧೆ ಏರ್ಪಡಿಸಿದ್ದು, ಇದರಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳು ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸುವ ಶಿಕ್ಷಕರು ಸೇರಿ ಒಟ್ಟು 12 ಮಂದಿಯನ್ನು ಸನ್ಮಾನಿಸಲಾಗುವುದು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿಮಿ ಮರಿಯಮ್ ಜಾರ್ಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ, ಸಹಾಯಕ ಆಯುಕ್ತೆ ಮೋನಾ ರೋಟ್, ಅಪರ ಜಿಲ್ಲಾಧಿಕಾರಿ ಶಂಕರ ವಣಿಕ್ಯಾಳ್ ಸೇರಿದಂತೆ ಎಲ್ಲಾ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here