ಕಲಬುರಗಿ.ಆ.12:ಕರ್ನಾಟಕ ಉಚ್ಚ ನ್ಯಾಯಾಲಯ ಕಲಬುರಗಿ ಪೀಠ, ಕಲಬುರಗಿ ಜಿಲ್ಲಾ ನ್ಯಾಯಾಲಯ ಹಾಗೂ ಜಿಲ್ಲೆಯ ಇತರೆ ತಾಲೂಕು ನ್ಯಾಯಾಲಯಗಳಲ್ಲಿ ಇದೇ ಶನಿವಾರ ಆಗಸ್ಟ್ 14 ರಂದು ಬೆಳಗ್ಗೆ 9.30 ರಿಂದ ಸಾಯಂಕಾಲ 5.30 ರವರೆಗೆ “ಮೆಗಾ ಲೋಕ್ ಅದಾಲತ್” ಕಾರ್ಯಕ್ರಮ ನಡೆಯಲಿದ್ದು, ಅಂದು ವಾರಾಂತ್ಯದ ಕರ್ಫ್ಯೂ ಇದ್ದರೂ ಸಹ ಕಕ್ಷಿದಾರರು ಕೋರ್ಟ್ಗೆ ತೆರಳಿ ‘ಮೆಗಾ ಲೋಕ್ ಅದಾಲತ್’ನಲ್ಲಿ ಪಾಲ್ಗೊಳ್ಳಲು ಯಾವುದೇ ನಿರ್ಬಂಧವಿಲ್ಲ ಎಂದು ಕಲಬುರಗಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಬುಧವಾರ ಆದೇಶ ಹೊರಡಿಸಿದ್ದಾರೆ.
ಮೇಲ್ಕಂಡ ದಿನದಂದು ಕಕ್ಷಿದಾರರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘನೆಯಾಗದAತೆ ನೋಡಿಕೊಳ್ಳಬೇಕು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
Home Featured Kalaburagi ವಿಕೇಂಡ್ ಕರ್ಫ್ಯೂ ಇದ್ದರೂ ‘ಲೋಕ್ ಅದಾಲತ್’ ಕಕ್ಷಿದಾರರಿಗೆ ಅನುಮತಿ ನೀಡಿ ಜಿಲ್ಲಾಧಿಕಾರಿಗಳ ಆದೇಶ