ಕಲಬುರಗಿ, ಆಗಸ್ಟ. 12: ನಾನು ಕಲಬುರಗಿ ಜಿಲ್ಲೆಯ ಅಳಿಯ, ಕಲಬುರಗಿ ಜಿಲ್ಲೆಗೆ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗಬೇಕುತ್ತು, ಇದು ನನಗೂ ಸೇರಿದಂತೆ ಎಲ್ಲರಿಗೂ ನೋವು ತಂದಿದ್ದು ನಿಜ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.
ಅವರಿಂದಿಲ್ಲಿ ಗುರುವಾರ ಮಾತನಾಡುತ್ತ, ರಾಜ್ಯದಲ್ಲಿ ಬಿಜೆಪಿ ಪಕ್ಷ ತನ್ನ ಐದು ವರ್ಷ ಆಡಳಿತ ಪೂರ್ಣಗೊಳಿಸುವ ವಿಶ್ವಾಸ ವ್ಯಕ್ತಪಡಿಸಿದ, ಅವರು ಇನ್ನು ನಾಲ್ಕು ಸ್ಥಾನಗಳು ಖಾಲಿಯಿದ್ದು, ಕಲಬುರಗಿ ಜಿಲ್ಲೆಗೆ ಸೂಕ್ತ ಸ್ಥಾನಮಾನ ಸಿಗುವ ವಿಶ್ವಾಸವಿದೆ ಎಂದರು.
ನಾನು ಗುಲ್ಬರ್ಗಾ ಜಿಲ್ಲೆಯ ಅಳಿಯನಾಗಿದ್ದು, ಜಿಲ್ಲೆಗೆ ಸಚಿವ ಸ್ಥಾನ ಸಿಗದಿರೋದು ನನಗೂ ವೈಯುಕ್ತಿಕವಾಗಿ ಬೇಸರ ತಂದಿದೆ ಎಂದರು.