ಕಲಬುಗಿ, ಆಗಸ್ಟ. 12: ಯಾವುದೇ ಮಂತ್ರಿ ಸ್ಥಾನವಾಗಲಿ, ಪಕ್ಷದ ಯಾವುದೇ ಉನ್ನತ ಹುದ್ದೆಗಾಗಲಿ ಹುಡುಕಿಕೊಂಡು ಹೋಗುವುದಿಲ್ಲ, ಪಕ್ಷದ ರಾಜ್ಯ ಉಪಾಧ್ಯಕ್ಷನಾಗಿ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಬಿ. ವೈ. ವಿಜಯೇಂದ್ರ ಅವರು ಹೇಳಿದ್ದಾರೆ.
ಅವರು ಕಲಬುರಗಿಯಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡುತ್ತ, ಪಕ್ಷ ಸಂಘಟನೆಗಾಗಿ ನಮ್ಮ ತಂದೆ ಯಡಿಯೂರಪ್ಪ ಅವರು ರಾಜ್ಯದಲ್ಲಿ ಸೈಕಲ್ ಮೇಲೆ ಓಡಾಡಿ ಪಕ್ಷ ಕಟ್ಟಿ ಬೆಳಸಿದ್ದಾರೆ, ರಾಜ್ಯದ ಜನ ಅವರ ಹೋರಾಟ ಗುರುತಿಸಿ ಪಕ್ಷ ಅಧಿಕಾರಕ್ಕೆ ತಂದಿದ್ದಾರೆ ಎಂದರು.
ಪಕ್ಷದ ವರಿಷ್ಠರು ಯಾವುದೇ ಸ್ಥಾನಮಾನ ಕೊಟ್ಟರೂ ಅದನ್ನ ಯಶಸ್ವಿಯಾಗಿ ನಿಭಾಯಿಸಿಕೊಂಡು ಹೋಗುತ್ತೇನೆ ಅಲ್ಲದೇ ರಾಜ್ಯದಲ್ಲಿ ಪ್ರಸ್ತುತ ತಲೆದೊರಿರುವ ಖಾತೆ ಕ್ಯಾತೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳಿದ್ದು ಅದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವರು ಬಗೆಹಿರಿಸಿಕೊಂಡು ಹೋಗುತ್ತಾರೆ ಎಂದು ನುಡಿದರು.
ಬಿಜೆಪಿ ಅಧಿಕಾರಕ್ಕೆ ತರುವಲ್ಲಿ ಆನಂದ ಸಿಂಗ್ ಸೇರಿದಂತೆ 17 ಜನ ಶಾಸಕರು ಕಾಂಗ್ರೆಸ್, ಜೆಡಿಎಸ್ ತ್ಯಜೀಸಿ ಬಂದಿದ್ದಾರೆ. ಅವರ ಬಗ್ಗೆ ಸರಕಾರಕ್ಕೆ ಹಾಗೂ ಯಡಿಯೂರಪ್ಪರಿಗೆ ಗೌರವವಿವದೆ, ಅವರುಗಳನ್ನು ಗೌರವಯುತವಾಗಿ ನಡೆಸಿಕೊಂಡು ಹೋಗಲಾಗುವುದು ಎಂದರು ತಿಳಿಸಿದರು.
ನಾನು ಸಚಿವ ಸ್ಥಾನ ಅಥಾವ ಡಿಸಿಎಂ ಹುದ್ದೆಗೆ ಆಕಾಂಕ್ಷಿಯಾಗಿರಲಿಲ್ಲ, ಪ್ರಾಮಾಣಿಕವಾಗಿ ಹೇಳುತ್ತೇನೆ, ನಮ್ಮ ತಂದೆ ನನ್ನ ಸಲುವಾಗಿ ಯಾವುದೇ ಹುದ್ದೆಗೆ ಬೇಡಿಕೆ ಇಟ್ಟಿಲ್ಲ. ನನಗಿನ್ನು 35 ವರ್ಷ ವಯಸ್ಸು ಆಗಿದೆ, ನಾನು ಸಾಕಷ್ಟು ರಾಜಕೀಯವಾಗಿ ಇನ್ನು ಬೆಳೆಯಬೇಕಾಗಿದೆ ಅಲ್ಲದೇ ಪಕ್ಷವನ್ನ ತಳಮಟ್ಟದಿಂದ ಬೆಳೆಸಬೇಕಾಗಿದೆ ಎಂದರು.
ರಾಷ್ಟ್ರೀಯ ನಾಯಕರ ಚರ್ಚೆ ನಂತರ ಯಡಿಯೂರಪ್ಪರನವರು ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದರು.