ಕಲಬುರಗಿ, ಆಗಸ್ಟ. 15: ನಮ್ಮ ಪೂರ್ವಜರ ತ್ಯಾಗದ ಫಲ ಈ ಸ್ವಾತಂತ್ರ‍್ಯ. ಅವರ ಬಲಿದಾ ನವನ್ನು ಸ್ಮರಿಸುತ್ತ ಮುಂದಿನ ಪೀಳಿಗೆಗೆ ಉತ್ತಮ ಸಮಾಜ ನಿರ್ಮಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಬೃಹತ್ತ ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ರುದ್ರಪ್ಪಾ ನಿರಾಣಿ ಅವರು ಕರೆ ನೀಡಿದ್ದಾರೆ.
ಅವರು ರವಿವಾರ ನಗರದ ಪೋಲಿಸ್ ಪರೇಡ ಮೈದಾನದಲ್ಲಿ ಭಾರತದ 75ನೇ ಸ್ವಾತಂತ್ರೊö್ಯÃತ್ಸವ ದಿನಾಚರಣೆಯ ಅಂಗವಾಗಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡುತ್ತಿದ್ದರು.
ಮೊದಲಿಗೆ ಪ್ರತಿಯೊಬ್ಬರಿಗೂ 75 ನೇ ಸ್ವಾತಂತ್ರ‍್ಯ ದಿನಾಚ ರಣೆಯ ಶುಭಾಶಯಗಳನ್ನು ತಿಳಿಸಿದ ಸಚಿವರು, ಮುಂದುವರೆದು ಮಾತನಾಡುತ್ತ, 1947 ಆಗಸ್ಟ್ 15 ಮಧ್ಯರಾತ್ರಿ 12 ಗಂಟೆಗೆ ಭಾರತ ಬ್ರಿಟಿಷರ ದಾಸ್ಯದಿಂದ ಮುಕ್ತವಾಯಿತು. ಸುಮಾರು 200 ವರ್ಷಗಳ ಕಾಲ ನಮ್ಮ ಹಕ್ಕಾದ ಸ್ವಾತಂತ್ರ‍್ಯ ಪಡೆಯಲು ಅಸಂಖ್ಯಾತ ಜನ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಅವರ ಬಲಿದಾನ-ತ್ಯಾಗದಿಂದಲೇ ನಮಗೆ ಸ್ವಾತಂತ್ರ‍್ಯ ಸಿಕ್ಕಿದೆ ಎಂದರು.
ಸ್ವಾತಂತ್ರ‍್ಯವು ದೇವರು ನಮಗೆ ನೀಡಿದ ವರ. ನಮ್ಮಿಂದ ಈ ವರವನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ. ನಾವೆಲ್ಲರೂ ಈ ದಿನವನ್ನು ಸಂಭ್ರಮಿಸೋಣ.
75 ವರ್ಷಗಳ ಹಿಂದೆ ಆಗಸ್ಟ್ 15 ರಂದು ಪರಕೀಯರ ಆಡಳಿತದ ಅಂಧಕಾರದಿAದ ಸ್ವಾತಂತ್ರ‍್ಯದ ಹೊಸ ಬೆಳಕಿಗೆ ಭಾರತ ತನ್ನನ್ನು ತೆರೆದುಕೊಂಡಿತು. ಅದು ಶತಮಾನಗಳ ಕಾಲದ ವಸಾಹತುಷಾಹಿ ಪ್ರಭುತ್ವಕ್ಕೆ ಇತಿಶ್ರೀ ಹಾಡಿ ನಮ್ಮ ಬದುಕನ್ನು ನಾವೇ ಕಟ್ಟಿಕೊಳ್ಳುತ್ತೇವೆ ಎಂದು ಈ ದೇಶದ ಪ್ರಜೆಗಳು ಒಕ್ಕೊರಲ ದನಿಯಿಂದ ನಿರ್ಧರಿಸಿದ ಅಮೃತ ಘಳಿಗೆ ಎಂದು ಸ್ಮರಿಸಿದರು.
ಸ್ವಾತಂತ್ರ‍್ಯವು ಬಣ್ಣಗಳು ಅಥವಾ ಆಕಾರಗಳನ್ನು ನೋಡುವುದಿಲ್ಲ. ಈಗಾಗಲೇ ಜಗತ್ತಿನಲ್ಲಿ ಸಾಕಷ್ಟು ದ್ವೇಷ ಮತ್ತು ಹಿಂಸೆಯಿದೆ ಅವುಗಳ ನಡುವೆ ಈಗ ನಾವು ಪ್ರೀತಿ, ಏಕತೆ ಮತ್ತು ತಿಳುವಳಿಕೆಯಿಂದ ಉತ್ತಮ ಭವಿಷ್ಯವನ್ನು ನಿರ್ಮಿಸಬೇಕಾಗಿದೆ.
ಸ್ವಾತಂತ್ರ‍್ಯ ಹೋರಾಟದಲ್ಲಿ ಕರ್ನಾಟಕದ ಪಾತ್ರ ಅವಿಸ್ಮರಣೀಯ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ,, ವೀರರಾಣಿ ಕಿತ್ತೂರು ಚೆನ್ನಮ್ಮ, ಬೂದಿ ಬಸಪ್ಪ ನಾಯಕ, ಸುರಪುರದ ವೆಂಕಟಪ್ಪ ನಾಯಕ, ಕೊಡಗಿನ ಸ್ವಾಮಿ ಅಪರಾಂಪರ ಮೊದಲಾದ ಧೀರ ಹೋರಾಟಗಾರರ ಬಲಿದಾನವನ್ನು ನಾವು ಈ ದಿನ ಸ್ಮರಿಸಬೇಕು.
ಇಂದು ವಿಶ್ವದ ಅತಿದೊಡ್ಡ ಪ್ರಜಾ ಪ್ರಭುತ್ವವನ್ನು ಹೊಂದಿರುವ ದೇಶ ನಮ್ಮದು. ಹಿರಿಯರ ತ್ಯಾಗ-ಬಲಿದಾನಗಳ ಮೂಲಕ ಪಡೆದ ಸ್ವಾತಂತ್ರ‍್ಯದಿAದ ನಾವು ಸಾಧಿಸಿರುವುದು ಕಡಿಮೆಯೇನಲ್ಲ.
ಸ್ವಾತಂತ್ರ‍್ಯದ ಅರ್ಥ ಸಂಕುಚಿತವಾದುದಲ್ಲ, ವಿಶಾಲವಾದುದು. ಅದು ಕೇವಲ ರಾಜಕೀಯ ಕ್ಷೇತ್ರಕ್ಕೆ ಸೀಮಿತವಾದುದಲ್ಲ. ನಮ್ಮ ಭಾಷೆ, ಸಂಸ್ಕೃತಿ, ಆಹಾರ, ಉಡುಗೆ ತೊಡುಗೆ ಎಲ್ಲವೂ ನಮ್ಮ ಸ್ವಾತಂತ್ರ‍್ಯ. ಮತ್ತೊಬ್ಬರ ಈ ಸ್ವಾತಂತ್ರ‍್ಯವನ್ನು ಗೌರವಿಸುವುದು ನಿಜವಾದ ದೇಶಪ್ರೇಮ.
ಸ್ವಾತಂತ್ರ‍್ಯ ಎಂಬುವುದು ಪ್ರತಿಯೊಬ್ಬರ ಜೀವನದಲ್ಲಿ ಬಹುಮುಖ್ಯವಾದ ಅಂಶ. ಇದನ್ನು ಕಿತ್ತುಕೊಳ್ಳುವ ಹಕ್ಕು ಯಾರಿಗೂ ಇಲ್ಲ, ನಮ್ಮ ಸಮಾಜದ ರಕ್ಷಣೆಗೆ ಬದ್ಧರಾಗಿರೋಣ.
ಭಾರತ ದೇಶದ ಸ್ವಾತಂತ್ರ‍್ಯಕ್ಕಾಗಿ ವೀರಯೋಧರು ವೈಯಕ್ತಿಕ ಕುಟುಂಬ, ಜೀವನ, ಪ್ರೀತಿ ಅಂತಿಮವಾಗಿ ತಮ್ಮ ಪ್ರಾಣವನ್ನೂ ತ್ಯಾಗ ಮಾಡಿದ್ದಾರೆ. ಈ ದೇಶದ ಸ್ವಾತಂತ್ರ‍್ಯದ ಬೆಲೆ ನನಗೆ ತಿಳಿದಿದೆ. ನಾನೊಬ್ಬ ಅಪ್ಪಟ ದೇಶಭಕ್ತ, ನನ್ನ ದೇಶ, ನನ್ನ ಹೆಮ್ಮೆ.
75ನೇ ಸ್ವಾತಂತ್ರ‍್ಯದ ಅಮೃತ ಮಹೋತ್ಸವ ಅಂಗವಾಗಿ ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಸಂಸದ ಡಾ.ಉಮೇಶ ಜಾಧವ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷರು ಮತ್ತು ಸೇಡಂ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ, ಶಾಸಕರಾದ ಬಸವರಾಜ ಮತ್ತಿಮೂಡ, ವಿಧಾನ ಪರಿಷತ್ತಿನ ಶಾಸಕರಾದ ಬಿ.ಜಿ.ಪಾಟಿಲ, ಸುನೀಲ ವಲ್ಯಾಪುರೆ, ಕರ್ನಾಟಕ ನವೀಕರಿಸ ಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಅಧ್ಯಕ್ಷ ಚಂದು ಪಾಟೀಲ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಶಿಕಲಾ ಟೆಂಗಳಿ,
ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ, ಐ.ಜಿ.ಪಿ ಮನೀಷ ಖರ್ಬಿಕರ್, ಕ.ಕ.ರ.ಸಾ. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೂರ್ಮರಾವ ಎಂ., ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ನಲಿನ್ ಅತುಲ್,
ಡಿ.ಸಿ.ವಿ.ವಿ.ಜ್ಯೋತ್ಸ್ನಾ, ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ, ಎಸ್.ಪಿ. ಡಾ.ಸಿಮಿ ಮರಿಯಮ್ ಜಾರ್ಜ್, ಜಿಲ್ಲಾ ಪಂಚಾಯತ್ ಸಿ.ಇ.ಓ ಡಾ.ದಿಲೀಶ ಶಶಿ, ಇನ್ನಿತರ ಜನಪ್ರತಿನಿಧಿಗಳು, ಅಧಿಕಾರಿಗಳು ಇದ್ದರು