ಕಲಬುರಗಿ ಸೇರಿ ಮೂರು ಪಾಲಿಕೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ; ಕಟೀಲ್

0
838

ಕಲಬುರಗಿ, ಆಗಸ್ಟ. 21: ಬರುವ ತಿಂಗಳು ಸೆಪ್ಟಂಬರ್ 3ರಂದು ನಡೆಯಲಿರುವ ರಾಜ್ಯದ ಮೂರು ಮಹಾನಗರಪಾಲಿಕೆಗಳ ಚುನಾವಣೆಯಲ್ಲಿ ಆಡಳಿತರೂಢ ನಮ್ಮ ಪಕ್ಷವ ಅಧಿಕಾರ ಚುಕ್ಕಾ ಹಿಡಿಯಲಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಅವರು ಹೇಳಿದ್ದಾರೆ.
ಅವರಿಂದಿಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, ಕಲಬುರಗಿ, ಬೆಳಗಾಂವಿ, ಹುಬ್ಬಳಿ-ಧಾರವಾಡ ಈ ಮೂರು ಮಹಾನಗರಪಾಲಿಗಳು ಬಿಜೆಪಿ ತಕ್ಕೆಗೆ ಬರಲಿದ್ದು, ಒಳ್ಳೆಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಮೂಲಕ ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಅವರು ಅದರಲ್ಲೂ ಕಲಬುರಗಿಯಲ್ಲಿ ದಕ್ಷಿಣ ಮತ್ತು ಉತ್ತರ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪಾಲಿಕೆಯ ಅತೀ ಹೆಚ್ಚು ವಾರ್ಡಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸುವ ಭರವಸೆ ವ್ಯಕ್ತಪಡಿಸಿದರು.
ಈಗಾಗಲೇ ನಮ್ಮ ಪಕ್ಷವು ಇಂದು ಮೊದಲ ಪಟ್ಟಿ ಬಿಡುಗಡೆ ಮಾಡಲಿದ್ದು, ನಾಳೆ ಎರಡನೇ ಪಟ್ಟಿ ಬಿಡುಗಡೆ ಮಾಡುತ್ತದೆ ಎಂದು ನುಡಿದರು.
ಈಗಾಗಲೇ ಅತೃಪ್ತ ಬಿಜೆಪಿ ಕಾರ್ಯಕರ್ತರು ಪಕ್ಷ ತೋರಿಯುತ್ತಿದ್ದು, ಈ ನಿಟ್ಟಿನಲ್ಲಿ ಇಂದು ಬಿಜೆಪಿ ಮಾಜಿ ಪಾಲಿಕೆ ಸದಸ್ಯ ಬಸವರಾಜ ನಾಶಿ ಅವರು ಕಾಂಗ್ರೆಸ್ ಪಕ್ಷ ಸೇರುವ ಮೂಲಕ ಪಕ್ಷಾಂತರ ಪರ್ವಕ್ಕೆ ಚಾಲನೆ ನೀಡಿದಂತಾಗಿದೆ. ಇನ್ನು ಹಲವಾರು ಪಕ್ಷದಲ್ಲಿ ಟಿಕೆಟ್ ಸಿಗದ ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿರುವ ಬಗ್ಗೆ ಸುಳಿವು ಲಭ್ಯವಾಗಿದೆ.
ರಾಜ್ಯದಲ್ಲಿ ಆಡಳಿತದಲ್ಲಿರುವ ಬಿಜೆಪಿ ಸರ್ಕಾರ ಕಲಬುರಗಿ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಅನುದಾನ ಕೊಟ್ಟಿದೆ. ಹೀಗಾಗಿ ಜನರು ಬಿಜೆಪಿಗೆ ಆಶೀರ್ವಾದ ಮಾಡುತ್ತಾರೆ ಎಂದರು.
ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಅವಧಿ ಪೂರ್ಣ ಮಾಡೋದಿಲ್ಲ ಎನ್ನುವ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿದ್ದು, ಇದಕ್ಕೆ ತಿರುಗೇಟು ನೀಡಿದ ಕಟೀಲ್ ಅವರು ಸಿದ್ದರಾಮಯ್ಯ ಶಾಶ್ವತವಾಗಿ ವಿರೋಧ ಪಕ್ಷದಲ್ಲಿ ಇರೋದು ಕನ್ಫರ್ಮ್ ಆಗಿದೆ, ಹಾಗಾಗಿ ಸಿದ್ದರಾಮಯ್ಯ ಜೋತಿಷ್ಯ ಹೇಳೋದಕ್ಕೆ ಮುಂದಾಗಿದ್ದಾರೆ ಎಂದು ಕಟೀಲ್ ನುಡಿದರು.

LEAVE A REPLY

Please enter your comment!
Please enter your name here