ಚುನಾವಣಾ ಪ್ರಚಾರಕ್ಕೆ ಆಟೋ ಸಮೇತ ವಾಹನ ಬಳಕೆ ನಿಷೇಧ;ಫೇಸ್ ಮಾಸ್ಕ್ ಧರಿಸುವುದು ಕಡ್ಡಾಯ:ಡಿಸಿ

0
1455
Vasireddi Vijaya Jyothsna, IAS – Delhivaarthe

ಕಲಬುರಗಿ,ಆ.22: ಕೋವಿಡ್ ಹಿನ್ನೆಲೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆಯ ಸಾರ್ವತ್ರಿಕ ಚುನಾವಣೆ ಮತ್ತು ವಾಡಿ ಪುರಸಭೆಯ ಉಪ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸಬೇಕು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ವಿ.ವಿ.ಜ್ಯೋತ್ಸ್ನಾ ತಿಳಿಸಿದ್ದಾರೆ.
ಮನೆ-ಮನೆ ಪ್ರಚಾರಕ್ಕೆ ಆಭ್ಯರ್ಥಿ ಸೇರಿ ಗರಿಷ್ಠ 5 ಜನ ಮಾತ್ರ ಭಾಗವಹಿಸಲು ಅಚಕಾಶವಿದ್ದು, ಸಾಮಾಜಿಕ ಅಂತರ ಕಾಯ್ದುಕೊಂಡು ಫೇಸ್ ಮಾಸ್ಕ್ ಧರಿಸಿ ತೆರಳಬಹುದಾಗಿದೆ. ಪ್ರಚಾರಕ್ಕೆ ವಾಹನ ಬಳಸುವುದನ್ನು ಮತ್ತು ಗುಂಪು-ಗುAಪಾಗಿ ಸೇರುವುದನ್ನು ನಿಷೇಧಿಸಲಾಗಿದೆ.
ಅಭ್ಯರ್ಥಿಗಳು ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿಯೂ ಪ್ರಚಾರ ಕೈಗೊಳ್ಳಬಹುದಾಗಿದ್ದು, ಇದಕ್ಕೆ ತಗಲುವ ವೆಚ್ಚದ ವಿವರ ಸಲ್ಲಿಸಬೇಕಾಗುತ್ತದೆ. ಇನ್ನೂ ನಿಯಮಾನುಸಾರ ಕರಪತ್ರಗಳನ್ನು ಮುದ್ರಿಸಿ ಹಂಚಬಹುದಾಗಿದ್ದು, ಹಂಚುವ ಸಂದರ್ಭದಲ್ಲಿ ಕಡ್ಡಾಯವಾಗಿ ಕೈ ಗವಸುಗಳನ್ನು ಹಾಕಿಕೊ ಳ್ಳಬೇಕು ಎಂದು ತಿಳಿಸಲಾಗಿದೆ.
ಇವುಗಳನ್ನು ಹೊರತುಪಡಿಸಿ ಇತರೆ ಯಾವುದೇ ವಿಧದ ಪ್ರಚಾರ ಕಾರ್ಯ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here