ಕಾಂಗ್ರೆಸ್ ಮತ ಬ್ಯಾಂಕ್ ರಾಜಕಾರಣ ಮಾಡುತ್ತಿದೆ:ಭಗವಂತ ಖೂಬಾ

0
571

ಕಲಬುರಗಿ, ಆಗಸ್ಟ. 30:ಕಳೆದ ನಾಲವತ್ತು, ಐವತ್ತು ವರ್ಷಗಳಿಂದ ಬಿಜೆಪಿಗೆ ಕಲಬುರಗಿ ಮಹಾನಗರಪಾಲಿಕೆಯಲ್ಲಿ ಅಧಿಕಾರವಿರಲಿಲ್ಲ, ಇಷ್ಟು ಸುಧೀರ್ಘ ಅವಧಿಯಲ್ಲಿ ಕಾಂಗ್ರೆಸ್ ಪಕ್ಷ ಯಾವುದೇ ಅಭಿವೃದ್ದಿ ಕಾರ್ಯಗಳನ್ನು ಮಾಡಿಲ್ಲ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಅವರು ಹೇಳಿದ್ದಾರೆ.
ಅವರಿಂದು ನಗರದ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ, ಕಾಂಗ್ರೆಸ್ ಪಕ್ಷ ಎಲ್ಲ ವಾರ್ಡಗಳಲ್ಲಿ ಅಭಿವೃದ್ಧಿ ಮಾಡಿಲ್ಲ, ತಮಗೆ ಬೇಕಾದ ವಾರ್ಡಗಳಳ್ಲಿ ಮಾತ್ರ ಅಭಿವೃದ್ಧಿ ಮಾಡುವ ಮೂಲಕ ತಾರತಮ್ಯದ ನೀತಿ ಅನುಸರಿಸಿದ್ದಾರೆ ಎಂದು ಖೂಬಾ ನುಡಿದರು.

ಕಳೆದ ಹಲವಾರು ವರ್ಷಗಳಲ್ಲಿ ಮಹಾನಗರಪಾಲಿಕೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದ ಅವರು ಇಲ್ಲಿ ಮತ ಬ್ಯಾಂಕ್ ರಾಜಕಾರಣ ನಡೆಯುತ್ತಿದೆ ಎಂದರು.
ಈ ಹಿಂದಿನ ಕಾಂಗ್ರೆಸ್ ಸರಕಾರಕ್ಕಿಂತ ನಮ್ಮ ಸರಕಾರ ಕಲಬುರಗಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದು, ಮುಂದಿನ ದಿನಗಳಲ್ಲಿ ಕಲಬುರಗಿಯನ್ನು ಸ್ಮಾರ್ಟ ಸಿಟಿ ಪಟ್ಟಿಯಲ್ಲಿ ಸೇರ್ಪಡೆಯಾಗಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಷಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ಸಿದ್ಧಾಜಿ ಪಾಟೀಲ್ ಸೇರಿದಂತೆ ಇನ್ನು ಅನೇಕ ಹಿರಿಯ ಬಿಜೆಪಿ ನಾಯಕರುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here